Hiring Reporter’s For more Information Contact Above Number 876 225 4007 . Program producer
Home / Breaking News / ಹುಬ್ಬಳ್ಳಿಯ ಕುಸಗಲ್ ಬಳಿ ಈರುಳ್ಳಿ ಹೊಲದಲ್ಲಿ ಗಾಂಜಾ ಪತ್ತೆ

ಹುಬ್ಬಳ್ಳಿಯ ಕುಸಗಲ್ ಬಳಿ ಈರುಳ್ಳಿ ಹೊಲದಲ್ಲಿ ಗಾಂಜಾ ಪತ್ತೆ

Spread the love

ಹುಬ್ಬಳ್ಳಿ ಈರುಳ್ಳಿ ಹೊಲದಲ್ಲಿ ಗಾಂಜಾ ಪತ್ತೆಯಾದ ಘಟನೆ ಹುಬ್ಬಳ್ಳಿ ತಾಲೂಕಿನ ಕುಸಗಲ್ ಗ್ರಾಮದ‌ ಬಳಿ ಮಂಗಳವಾರ ನಡೆದಿದೆ.

ಹುಬ್ಬಳ್ಳಿ ಗ್ರಾಮೀಣ ಠಾಣೆ ಪೊಲೀಸರ ಮಿಂಚಿನ ಕಾರ್ಯಾಚರಣೆ ವೇಳೆ ಈ ಅಕ್ರಮ ಬೆಳಕಿಗೆ ಬಂದಿದೆ. 18.4 ಕೆ.ಜಿ. ಹಸಿ ಗಾಂಜಾ ಗಿಡಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಈ ಪ್ರಕರಣ ಸಂಬಂಧ ಆರೋಪಿ ಚಂದ್ರು ಕಾಶೀನಾಥ ಬನ್ನಿಕೊಪ್ಪ (30) ನನ್ನು ಪೊಲೀಸರು ಬಂಧಿಸಿದ್ದಾರೆ.

ಹುಬ್ಬಳ್ಳಿ ಮೂಲದ ವ್ಯಕ್ತಿಯೊಬ್ಬರಿಂದ ಜಮೀನು ಬಾಡಿಗೆ ಪಡೆದು ಈರುಳ್ಳಿ, ಮೆಣಸಿನಕಾಯಿ ಬೆಳೆದಿದ್ದ ಚಂದ್ರು ಅದರ‌ ಮಧ್ಯದಲ್ಲಿ ಅಲ್ಲಲ್ಲಿ ಗಾಂಜಾ ಸಸಿಗಳನ್ನು ಬೆಳೆಸಿದ್ದ ಗಂಭೀರ ಆರೋಪ ಎದುರಿಸುತ್ತಿದ್ದಾನೆ.

ಖಚಿತ ಮಾಹಿತಿ ಮೇರೆಗೆ ಧಾರವಾಡ ಡಿವೈಎಸ್ ಪಿ ರವಿ ನಾಯಕ ಮಾರ್ಗದರ್ಶನದಲ್ಲಿ ಇನ್ಸ್‌ಪೆಕ್ಟರ್ ರಮೇಶ ಗೋಕಾಕ ಹಾಗೂ ತಂಡ ಈ ದಾಳಿ ನಡೆಸಿದೆ.

ಈ ಕುರಿತು ಹುಬ್ಬಳ್ಳಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಎನ್ ಡಿಪಿಎಸ್ ಕಾಯ್ದೆಯಡಿ ಪ್ರಕರಣ ದಾಖಲು ಆಗಿದ್ದು, ಆರೋಪಿ ಚಂದ್ರುನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಪೊಲೀಸರು ಪ್ರಜಾಕಿರಣ.ಕಾಮ್ ಗೆ ತಿಳಿಸಿದ್ದಾರೆ.

Check Also

ತಮಿಳು ಚಿತ್ರರಂಗದ ಖ್ಯಾತ ನಟ ಆತ್ಮಹತ್ಯೆಗೆ ಶರಣು

Spread the loveಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳು ಚಿತ್ರರಂಗದ ಉದಯೋನ್ಮುಖ ನಟ ತೆನ್ನರಸು ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!