Hiring Reporter’s For more Information Contact Above Number 876 225 4007 . Program producer
Home / Breaking News / ರಾಜಕಾರಣಿಗಳು, ಸೆಲೆಬ್ರಿಟಿಗಳಿಗೊಂದು ನ್ಯಾಯ, ಜನರಿಗೊಂದು ನ್ಯಾಯವೇ? : ಹೈಕೋರ್ಟ್ ಗರಂ

ರಾಜಕಾರಣಿಗಳು, ಸೆಲೆಬ್ರಿಟಿಗಳಿಗೊಂದು ನ್ಯಾಯ, ಜನರಿಗೊಂದು ನ್ಯಾಯವೇ? : ಹೈಕೋರ್ಟ್ ಗರಂ

Spread the love

ಬೆಂಗಳೂರು: ಕೊರೊನಾ ನಿಯಂತ್ರಣಕ್ಕಾಗಿ ವಿಧಿಸಿರುವ ನಿಯಮಗಳನ್ನು ಉಲ್ಲಂಘಿಸುವ ರಾಜಕಾರಣಿಗಳು, ಸೆಲೆಬ್ರೆಟಿಗಳ ವಿರುದ್ಧ ಕ್ರಮ ಕೈಗೊಳ್ಳದ ಸರ್ಕಾರದ ಕ್ರಮಕ್ಕೆ ಹೈಕೋರ್ಟ್ ಇಂದು ತೀವ್ರ ಗರಂ ಆಗಿದೆ.

ಪ್ರವೇಶ ನಿರ್ಬಂಧವಿದ್ದರೂ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನಕ್ಕೆ ಸಂಸದೆ ಶೋಭಾ ಕಂದ್ಲಾಜೆ ಹಾಗೂ ಚಿತ್ರನಟ ದರ್ಶನ್ ಅವರಿಗೆ ಅವಕಾಶ ಮಾಡಿಕೊಡಲಾಗಿದೆ ಮತ್ತು ಡಿ.ಕೆ.ಶಿವಕುಮಾರ್ ಪುತ್ರಿ ನಿಶ್ಚಿತಾರ್ಥದ ಸಮಯದಲ್ಲಿ ನಿಯಮಾವಳಿಗಳನ್ನು ಉಲ್ಲಂಘಿಸಲಾಗಿದೆ ಎಂಬುದು ಸೇರಿದಂತೆ

ಹಲವು ಆರೋಪಗಳನ್ನು ಮಾಡಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಾಧೀಶ ಓಕಾ ಅವರ ಪೀಠ ರಾಜಕಾರಣಿಗಳು, ಸೆಲೆಬ್ರಿಟಿಗಳಿಗೊಂದು ನ್ಯಾಯ, ಜನಸಾಮಾನ್ಯರಿಗೊಂದು ನ್ಯಾಯವೇ?

ಈ ಬಗ್ಗೆ ಸಲ್ಲಿಕೆಯಾಗಿರುವ ದೂರುಗಳ ಸಂಬಂಧ ಪ್ರತ್ಯೇಕ ವಿಚಾರಣಾ ವರದಿ ನೀಡುವಂತೆ ಸೂಚಿಸಿ ವಿಚಾರಣೆಯನ್ನು ಮುಂದೂಡಿದೆ.

ಕೊರೊನಾ ಸೋಂಕು ವ್ಯಾಪಿಸದಂತೆ ವಿವಿಧ ಕಟ್ಟುನಿಟ್ಟಿನ ಕ್ರಮಗಳನ್ನು ವಿಧಿಸಲಾಗಿತ್ತು. ಈ ನಡುವೆಯೇ ರಾಜಕಾರಣಿಗಳು ಹಲವು ಕಾರ್ಯಕ್ರಮಗಳನ್ನು ನಡೆಸಿದ್ದರು. ಇದನ್ನು ಆಕ್ಷೇಪಿಸಿ ನ್ಯಾಯಾಲಯಕ್ಕೆ ಹಲವು ದೂರುಗಳನ್ನು ಸಲ್ಲಿಸಲಾಯಿತು.

Check Also

ಶೂಟೌಟ್ ಸ್ಥಳದಲ್ಲಿ ಎರಡು ಬುಲೆಟ್ ಪತ್ತೆ

Spread the loveಹುಬ್ಬಳ್ಳಿ: ಶೂಟೌಟ್ ನಡೆದ ಸ್ಥಳದಲ್ಲಿ ಎರಡು ಬುಲೆಟ್ ಪತ್ತೆಯಾಗಿದೆ.ಧಾರವಾಡದ ಪ್ರೂಟ್ ಇರ್ಫಾನ್ ಎಂಬುವವರ ಮೇಲೆ ಶೂಟೌಟ್ ನಡೆಸಲಾಗಿದ್ದು,ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!