Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಆದ್ಯತೆ: ಕೃಷ್ಣಮೂರ್ತಿ.

ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆಗೆ ಆದ್ಯತೆ: ಕೃಷ್ಣಮೂರ್ತಿ.

ಮಂಡ್ಯ:ಮುಕ್ತ ಹಾಗೂ ನ್ಯಾಯಸಮ್ಮತವಾದ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗದ ನಿರ್ದೇಶನದಂತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಜಿಲ್ಲಾಡಳಿತ ಸಜ್ಜಾಗಿದೆ ಎಂದು ಚುನಾವಣಾಧಿಕಾರಿ ಹೆಚ್.ಕೆ.ಕೃಷ್ಣಮೂರ್ತಿ ತಿಳಿಸಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಡಿಸೆಂಬರ್ 3ರ ಸಂಜೆ 5ಗಂಟೆಗೆ ಬಹಿರಂಗ ಪ್ರಚಾರವು ಅಂತ್ಯಗೊಳ್ಳುತ್ತಿದೆ.
ಕ್ಷೇತ್ರದಲ್ಲಿ ನೆಲೆಸಿರುವ ಮತದಾರರಲ್ಲದ ಕ್ಷೇತ್ರದ ಹೊರಗಿನ ಜನರು ಹಾಗೂ ಮುಖಂಡರು ಕ್ಷೇತ್ರ ಬಿಟ್ಟು ತೆರಳಬೇಕು ಎಂದರು.
ಕೆ.ಆರ್.ಪೇಟೆಯ ವಸತಿಗೃಹಗಳು ಹಾಗೂ ತೋಟದ ಮನೆಗಳಲ್ಲಿ ವಾಸವಿರುವ ಮುಖಂಡರು ಹಾಗೂ ಹೊರಗಿನಿಂದ ಆಗಮಿಸಿರುವ ಕಾರ್ಯಕರ್ತರು ಕ್ಷೇತ್ರ ಬಿಟ್ಟು ಕಡ್ಡಾಯವಾಗಿ ತೆರಳಬೇಕು, ಇಲ್ಲದಿದ್ದರೆ‌ ಸ್ಥಳೀಯರಲ್ಲದ ಹೊರಗಿನ ವ್ಯಕ್ತಿಗಳ ವಿರುದ್ಧ ಮೊಕದ್ದಮೆ ದಾಖಲಿಸಲಾಗುವುದು ಎಂದು ಚುನಾವಣಾಧಿಕಾರಿ ಹೆಚ್.ಕೆ.ಕೃಷ್ಣಮೂರ್ತಿ ಎಚ್ಚರಿಕೆ ನೀಡಿದರು.
ಕ್ಷೇತ್ರದ‌ 258 ಮತಗಟ್ಟೆಗಳಲ್ಲಿಯೂ ಬಿಗಿ ಪೋಲಿಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ಪ್ಯಾರಾಮಿಲ್ಟ್ರಿ ಯೋಧರು, ಸಶಸ್ತ್ರ ಮೀಸಲು ಪಡೆಯ ಪೋಲಿಸರು ಹಾಗೂ ಗೃಹರಕ್ಷಕ ದಳದ ಸಿಬ್ಬಂಧಿಯನ್ನು ಭದ್ರತೆಗೆ ನಿಯೋಜಿಸಲಾಗಿದೆ.
ಮತದಾರರು ಚುನಾವಣಾ ಆಯೋಗವು ಸೂಚಿಸಿರುವ 11ದಾಖಲೆಗಳಲ್ಲಿ ಯಾವುದಾದರೂ ಒಂದು ದಾಖಲೆಯನ್ನು ಮತಗಟ್ಟೆಗೆ ತಂದು ಮತದಾರರ ಪಟ್ಟಿಯಲ್ಲಿ ಹೆಸರಿರುವ ಮತದಾರರು ಮುಕ್ತವಾಗಿ ಮತ ಚಲಾಯಿಸಬೇಕು ಎಂದು ಕೃಷ್ಣಮೂರ್ತಿ ಮನವಿ ಮಾಡಿದರು.
ಮುಕ್ತ ನ್ಯಾಯಸಮ್ಮತವಾದ ಚುನಾವಣೆಯನ್ನು ನಡೆಸಲು ಚುನಾವಣಾ ಆಯೋಗವು‍ ಬದ್ಧವಾಗಿದೆ.
ಸೂಕ್ಷ್ಮ, ಅತೀ ಸೂಕ್ಷ್ಮ ಮತಗಟ್ಟೆಗಳನ್ನು ಗುರುತಿಸಿ ಬಿಗಿ ಭದ್ರತೆಯನ್ನು ಆಯೋಜಿಸಲಾಗಿದೆ ಎಂದು ಕೃಷ್ಣಮೂರ್ತಿ ವಿವರಿಸಿದರು.
ಚುನಾವಣೆಗೆ ಸಂಬಂದಿಸಿದ ನಿಖರವಾದ ಮಾಹಿತಿಯನ್ನು ನಮಗೆ ನೀಡಿದರೆ ನಿರ್ದಾಕ್ಷಿಣ್ಯವಾಗಿ ಕ್ರಮಕೈಗೊಳ್ಳಲಾಗುವುದು.
ಶೇ.100ಕ್ಕೆ 100ರಷ್ಟು ಮತದಾನ ಮಾಡುವ ಮೂಲಕ ಕೆ.ಆರ್.ಪೇಟೆ ವಿಧಾನಸಭಾ ಚುನಾವಣೆಯಲ್ಲಿ ಕ್ಷೇತ್ರದ ಮತದಾರರು.
ಹೊಸ ಇತಿಹಾಸವನ್ನು ನಿರ್ಮಾಣ ಮಾಡಬೇಕು ಎಂದು ಚುನಾವಣಾಧಿಕಾರಿ ಹೆಚ್.ಕೆ.ಕೃಷ್ಣಮೂರ್ತಿ ಮನವಿ ಮಾಡಿದರು.ಸಹಾಯಕ ಚುನಾವಣಾಧಿಕಾರಿ ಎಂ.ಶಿವಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.

Share

About Bora nayak BIG TV NEWS, Mandya

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!