Hiring Reporter’s For more Information Contact Above Number 876 225 4007 . Program producer
Home / Breaking News / ಹತ್ರಾಸ್ ಸಾಮೂಹಿಕ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

ಹತ್ರಾಸ್ ಸಾಮೂಹಿಕ ಅತ್ಯಾಚಾರಿಗಳಿಗೆ ಗಲ್ಲು ಶಿಕ್ಷೆ ನೀಡುವಂತೆ ಆಗ್ರಹಿಸಿ ಪ್ರತಿಭಟನೆ

Spread the love

ಹುಬ್ಬಳ್ಳಿ: ಹತ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಪೋಷಕರನ್ನು ಕೂಡಿಹಾಕಿ ಸಂತ್ರಸ್ತೆಯ ಅಂತ್ಯಕ್ರಿಯೆ ನಡೆಸಿದ್ದಕ್ಕೆ ಉತ್ತರ ಪ್ರದೇಶ ಸರ್ಕಾರದ ವಿರುದ್ಧ ದೇಶದೆಲ್ಲೆಡೆ ಭಾರಿ ಆಕ್ರೋಶ ವ್ಯಕ್ತವಾಗುತ್ತಿದ್ದು, ಇಂದು ಹುಬ್ಬಳ್ಳಿಯಲ್ಲಿ ವಿವಿಧ ದಲಿತ ಸಂಘನೆ ಸಂಸ್ಥೆಗಳ ಒಕ್ಕೂಟ ಕಾರ್ಯಕರ್ತರು ಬ್ರಹತ್ ಮೆರವಣಿಗೆ ಮೂಲಕ ಪ್ರತಿಭಟನೆ ನಡೆಸಿದರು.

ನಗರದ ಅಂಬೇಡ್ಕರ್ ವೃತ್ತದಿಂದ ತಹಶಿಲ್ದಾರರ ಕಚೇರಿವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ರಸ್ತೆ ಬಂಧ ಮಾಡಿ ಪ್ರತಿಭಟನಾಕಾರರು, ಈ ವೇಳೆ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಅವರು ವಿರುದ್ಧ ಘೋಷಣೆಗಳನ್ನು ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಬಳಿಕ ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಡಳಿತ ಹೇರುವಂತೆ ತಹಶಿಲ್ದಾರರ ಅವರ ಮೂಲಕ ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ಮನವಿ ಸಲ್ಲಿಸಿದರು.

ಉತ್ತರ ಪ್ರದೇಶ ಸರ್ಕಾರವನ್ನು ವಿಸರ್ಜನೆಗೊಳಿಸಿ, ರಾಷ್ಟ್ರಪತಿ ಆಡಳಿತವನ್ನು ಹೇರಬೇಕು. 19 ವರ್ಷದ ಪರಿಶಿಷ್ಟ ಜಾತಿ ಮಹಿಳೆ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ದೇಶದ ಹೆಸರನ್ನು ಕಳಂಕಿತಗೊಳಿಸಿದೆ. ಉತ್ತರ ಪ್ರದೇಶದಲ್ಲಿ ಮಹಿಳೆಯರ ಮೇಲಿನ ನಡೆಯುತ್ತಿರುವ ಅಪರಾಧವನ್ನು ತಡೆಯಲು ಯೋಗಿ ಆದಿತ್ಯನಾಥ ನೇತೃತ್ವದ ಸರ್ಕಾರ ವಿಫಲವಾಗಿದೆ. ಅಲ್ಲದೆ ಉತ್ತರ ಪ್ರದೇಶದ ಪೊಲೀಸರು, ಅಪರಾಧಗಳನ್ನು ಮರೆಮಾಚಲು ಪ್ರಕರಣದ ಸಾಕ್ಷ್ಯಗಳನ್ನು ಅಳಿಸುತ್ತಿದ್ದಾರೆ. ಹೈಕೋರ್ಟ್ ಅಥವಾ ಸುಪ್ರೀಂಕೋರ್ಟ್‌ನ ನಿವೃತ್ತ ನ್ಯಾಯಾಧೀಶರ ಮೇಲ್ವಿಚಾರಣೆಯಲ್ಲಿ ಪ್ರಕರಣದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಯಬೇಕು. ಈ ಪ್ರಕರಣವನ್ನು ಇತರೆ ರಾಜ್ಯದ ವಿಶೇಷ ತ್ವರಿತ ವಿಚಾರಣಾ ನ್ಯಾಯಾಲಯಕ್ಕೆ ನೀಡಬೇಕು. ಉತ್ತರ ಪ್ರದೇಶ ಸರ್ಕಾರವು ಸಂತ್ರಸ್ತೆ ಕುಟುಂಬಕ್ಕೆ ಭದ್ರತೆ ನೀಡಬೇಕು ಎಂದು ಅವರು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಪೂರ್ವ ಕ್ಷೇತ್ರ ಶಾಸಕ ಪ್ರಸಾದ್ ಅಬಯ್ಯ, ಗುರುನಾಥ್ ಉಳಿಕಾಶಿ, ಅಲ್ತಾಫ್ ಹಳ್ಳುರ, ಹಾಗು ವಿವಿಧ ದಲಿತ ಸಂಘನೆ ಕಾರ್ಯಕರ್ತರು ಭಾಗಿಯಾಗಿದ್ದರು.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!