Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಅಮರಣಾಂತ ಉಪವಾಸ ಸತ್ಯಾಗ್ರಹ.

ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಅಮರಣಾಂತ ಉಪವಾಸ ಸತ್ಯಾಗ್ರಹ.

 

ಅಥಣಿ: ಕೃಷ್ಣಾ ನದಿಯ ಹಿಪ್ಪರಗಿ ಆಣೆಕಟ್ಟೆ ಹಿನ್ನೀರಿನಿಂದ ಬಾಧಿತವಾಗಿರುವ ಕವಟಕೊಪ್ಪ ಗ್ರಾಮದ 900 ಮನೆಗಳಿಗೆ ಶಾಶ್ವತ ಪರಿಹಾರಕ್ಕೆ ಆಗ್ರಹಿಸಿ ಆಮರಣ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ.
ಅಥಣಿ ತಾಲ್ಲೂಕು ತಹಶಿಲ್ದಾರ ಕಚೇರಿ ಆವರಣದಲ್ಲಿ ಶಾಮಿಯಾನ ಹಾಕಿ ಪ್ರತಿಭಟನೆ ನಡೆಸಲಾಗುತ್ತಿದ್ದು ಉಪವಾಸ ಸತ್ಯಾಗ್ರಹ ಇಂದು ಎರಡನೆ ದಿನಕ್ಕೆ ಮುಂದುವರೆದಿದೆ.
ಅಧಿಕಾರಿಗಳು ಸರ್ವೆ ಮಾಡುವ ಸಂಧರ್ಭದಲ್ಲಿ ತಾರತಮ್ಯ ಮಾಡುತ್ತಿದ್ದು ಇದರಿಂದಾಗಿ ನಿಜವಾದ ಸಂತ್ರಸ್ತರಿಗೆ ಅನ್ಯಾಯವಾಗುತ್ತಿದೆ ಎಂದು ಹೋರಾಟಗಾರರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ..
ಸತ್ತಿ ಗ್ರಾಮದ ಹೊರವಲಯದಲ್ಲಿ ಜಮಖಂಡಿ ತಾಲ್ಲೂಕು ಹಿಪ್ಪರಗಿಯಲ್ಲಿ ಬ್ಯಾರೇಜ್ ನಿರ್ಮಾಣ ಮಾಡಿದ್ದು ಈ
ಆಣೆಕಟ್ಟೆ ಹಿನ್ನೀರಿನಿಂದಾಗಿ ಬಾಧಿತವಾಗಿರುವ ಕವಟಕೊಪ್ಪ ಗ್ರಾಮದ 162 ಕುಟುಂಬಗಳಿಗೆ ಪರಿಹಾರ ಕೊಟ್ಟಿಲ್ಲ ಅಷ್ಟೆ ಅಲ್ಲದೆ ಸಪ್ತಸಾಗರ,ತೀರ್ಥ, ಇಂಗಳಗಾಂವ,ದರೂರ,ಅವರಕೋಡ,ಕುಸನಾಳ,ಮಳವಾಡ,ಶೇಗುಣಸಿ,ಬಣಜವಾಡ,ಕಾತ್ರಾಳ,ಸೇರಿದಂತೆ ಇಪ್ಪತ್ತಾರು ಗ್ರಾಮಗಳ ಗ್ರಾಮಸ್ಥರಿಗೆ ಇನ್ನೂ ಕೂಡ ಶಾಶ್ವತ ಪರಿಹಾರ ಸಿಕ್ಕಿಲ್ಲ,
ಹಿಪ್ಪರಗಿ ಆಣೆಕಟ್ಟೆ ಹಿನ್ನೀರಿನಿಂದ ಬಾಧಿತವಾಗಿ ಹದಿನಾಲ್ಕು ವರ್ಷ ಕಳೆಯುತ್ತ ಬಂದರೂ ಸಮರ್ಪಕ ಪರಿಹಾರ ಸಿಕ್ಕಿಲ್ಲ,ಅಷ್ಟೆ ಅಲ್ಲದೆ ಎರಡು ಸಲ ಕೃಷ್ಣಾ ನದಿ ಪ್ರವಾಹದಿಂದ ಮನೆಗಳನ್ನು ಕಳೆದುಕೊಂಡು,ಜಮೀನುಗಳಲ್ಲಿ ಬೆಳೆಹಾನಿ ಆದರೂ ಸದ್ಯ ಪರಿಹಾರ ಕೊಡಲು ಸಾಧ್ಯವಿಲ್ಲ ಎಂದು ಅಧಿಕಾರಿಗಳು ಹೇಳುತ್ತಿದ್ದು ತಮಗೆ ಅನ್ಯಾಯವಾಗುತ್ತಿದೆ ಆದ್ದರಿಂದ ಸದ್ಯ ಶಾಂತಿಯುತವಾಗಿ ನಡೆಯುತ್ತಿರುವ ಹೋರಾಟ ಉಗ್ರಸ್ವರೂಪ ಪಡೆಯುವ ಮೊದಲು ತಮಗೆ ನ್ಯಾಯ ಒದಗಿಸಬೇಕು ಎಂದು ಪ್ರತಿಭಟನಾ ನಿರತರು ಆಗ್ರಹಿಸಿದ್ದಾರೆ…

Share

About Site Default

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!