Hiring Reporter’s For more Information Contact Above Number 876 225 4007 . Program producer
Home / Breaking News / ಕೊನೆ ಹಂತದಲ್ಲಿ ಕೊರೊನಾ ಲಸಿಕೆ – ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

ಕೊನೆ ಹಂತದಲ್ಲಿ ಕೊರೊನಾ ಲಸಿಕೆ – ಇಲ್ಲಿದೆ ಭರ್ಜರಿ ಗುಡ್ ನ್ಯೂಸ್

Spread the love

ವಾಷಿಂಗ್ಟನ್: ಕೊರೊನಾ ಸೋಂಕು ತಡೆಯುವ ಉದ್ದೇಶದಿಂದ ಅಭಿವೃದ್ಧಿಪಡಿಸುತ್ತಿರುವ ಎರಡು ಲಸಿಕೆ ಪ್ರಯೋಗ ಕೊನೆಯ ಹಂತದಲ್ಲಿದ್ದು, ವರದಿ ಸಿದ್ಧಪಡಿಸಲಾಗುತ್ತಿದೆ.

ಅಮೆರಿಕದಲ್ಲಿ ನಡೆಯುತ್ತಿರುವ ನೂರಾರು ಕೊರೊನಾ ಲಸಿಕೆ ಪ್ರಯೋಗಗಳಲ್ಲಿ ಎರಡು ಲಸಿಕೆಗಳು ಕೊನೆಯ ಹಂತದ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸುವತ್ತ ಹೆಜ್ಜೆ ಇಟ್ಟಿವೆ. ನ್ಯಾಷನಲ್ ಇನ್ಸ್ ಟಿಟ್ಯೂಟ್ ಆಫ್ ಹೆಲ್ತ್ ಸಹಯೋಗದಲ್ಲಿ ಮಾಡೆರ್ನಾ ಅಭಿವೃದ್ಧಿಪಡಿಸುತ್ತಿರುವ ಲಸಿಕೆ ಮತ್ತು ಔಷಧ ತಯಾರಿಕೆ ಕಂಪನಿ ಪಿಫೈಝರ್ ತಯಾರಿಸುತ್ತಿರುವ ಲಸಿಕೆಗಳು ಅಂತಿಮ ಹಂತದ ಪರೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿವೆ.

ಸಮುದಾಯದಲ್ಲಿ ಹಲವರ ಮೇಲೆ ಪ್ರಾಯೋಗಿಕವಾಗಿ ಲಸಿಕೆ ಪ್ರಯೋಗ ನಡೆಸಿ ಪರಿಶೀಲನೆ ನಡೆಸಲಾಗಿದೆ. ಜಾರ್ಜಿಯಾದಲ್ಲಿ ಅಂತಿಮ ಹಂತದ ಪರೀಕ್ಷೆಯನ್ನು ನಡೆಸಲಾಗಿದೆ.

30 ಸಾವಿರ ಜನರಿಗೆ ಲಸಿಕೆ ನೀಡಿ ಆರೋಗ್ಯ ಪರಿಸ್ಥಿತಿಯನ್ನು ಗಮನಿಸಿ ವರದಿ ಸಿದ್ಧಪಡಿಸಲಾಗುವುದು ಎಂದು ಹೇಳಲಾಗಿದೆ.

Check Also

ಶೂಟೌಟ್ ಸ್ಥಳದಲ್ಲಿ ಎರಡು ಬುಲೆಟ್ ಪತ್ತೆ

Spread the loveಹುಬ್ಬಳ್ಳಿ: ಶೂಟೌಟ್ ನಡೆದ ಸ್ಥಳದಲ್ಲಿ ಎರಡು ಬುಲೆಟ್ ಪತ್ತೆಯಾಗಿದೆ.ಧಾರವಾಡದ ಪ್ರೂಟ್ ಇರ್ಫಾನ್ ಎಂಬುವವರ ಮೇಲೆ ಶೂಟೌಟ್ ನಡೆಸಲಾಗಿದ್ದು,ಹೊಟೇಲ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!