Breaking News
Hiring Reporter’s For more Information Contact Above Number 876 225 4007 . Program producer
Home / Breaking News / ರಾಜಸ್ಥಾನ ರಾಜಕೀಯ ಬಿಕ್ಕಟ್ಟಿಗೆ ಹೊಸ ಟ್ವಿಸ್ಟ್‌..!

ರಾಜಸ್ಥಾನ ರಾಜಕೀಯ ಬಿಕ್ಕಟ್ಟಿಗೆ ಹೊಸ ಟ್ವಿಸ್ಟ್‌..!

Spread the love

ಜೈಪುರ: ರಾಜಸ್ಥಾನ ರಾಜಕೀಯ ಬಿಕ್ಕಟ್ಟಿಗೆ ಮತ್ತೊಂದು ತಿರುವು ಸಿಕ್ಕಿದ್ದು, ಸಚಿನ್‌ ಪೈಲಟ್‌ಗೆ ಆನೆ ಬಲ ಬಂದಂತಾಗಿದೆ. ಅಂದ್ಹಾಗೆ, ಇಂದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಸರ್ಕಾರದ ಸಂಖ್ಯಾಬಲ ಪರೀಕ್ಷೆಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ರೆ, ರಾಜಸ್ಥಾನದಲ್ಲಿರುವ 6 ಜನ ಬಿಎಸ್‌ಪಿ ಶಾಸಕರು ಕಾಂಗ್ರೆಸ್ ವಿರುದ್ಧವಾಗಿ ಮತ ಚಲಾಯಿಸಬೇಕು ಎಂದು ಪಕ್ಷದ ರಾಷ್ಟ್ರಾಧ್ಯಕ್ಷೆ ಮಾಯಾವತಿ ಆದೇಶ ಹೊರಡಿಸಿದ್ದಾರೆ.

ಜನ ಬಹುಜನ ಸಮಾಜವಾದಿ ಪಕ್ಷದ ಶಾಸಕರಾದ ಆರ್. ಗುಧಾ, ಲಖನ್ ಸಿಂಗ್, ದೀಪ್ ಚಂದ್, ಜೆ.ಎಸ್. ಅವನಾ, ಸಂದೀಪ್ ಕುಮಾರ್ ಮತ್ತು ವಾಜಿಬ್ ಅಲಿ ಅವರಿಗೆ ಬಿಎಸ್ಪಿ ಪಕ್ಷ ನೊಟೀಸ್ ನೀಡಿದ್ದು, ವಿಪ್ ಜಾರಿ ಮಾಡಿದೆ. ಬಿಎಸ್‌ಪಿ ರಾಷ್ಟ್ರೀಯ ಪಕ್ಷವಾಗಿದ್ದು ಪಕ್ಷದ ಶಾಸಕರು ವಿಪ್ ಉಲ್ಲಂಘಿಸಿದರೆ ಶಾಸಕರನ್ನು ಶಾಸಕ ಸ್ಥಾನದಿಂದಲೇ ಅನರ್ಹಗೊಳಿಸಲಾಗುವುದು ಎಂದು ತಿಳಿಸಿದೆ.

ಅಂದ್ಹಾಗೆ, 18 ಜನ ಶಾಸಕರು ಈಗಾಗಲೇ ಸಚಿನ್ ಪೈಲಟ್ ಪರ ನಿಂತಿದ್ದಾರೆ. ಬಿಎಎಸ್‌ಪಿ ಶಾಸಕರು ವಿಧಾನಸಭಾ ಚುನಾವಣೆಯ ನಂತರ ಕಾಂಗ್ರೆಸ್ ಪಕ್ಷಕ್ಕೆ ತಮ್ಮ ಬೆಂಬಲವನ್ನ ನೀಡಿದ್ದರು. ಆದ್ರೆ, ಇದೀಗ ಕಾಂಗ್ರೆಸ್ ವಿರುದ್ಧ ಮತ ಚಲಾಯಿಸಿ ಎಂದು ಮಾಯಾವತಿ ಆದೇಶಿಸಿದ್ದಾರೆ. ಇದು ಕಾಂಗ್ರೆಸ್ ಸರ್ಕಾರ ಮತ್ತೊಂದು ತಲೆನೋವಾಗಿ ಪರಿಣಾಮಿಸೋದ್ರಲ್ಲಿ ಯಾವುದೇ ಅನುಮಾನವಿಲ್ಲ.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!