Breaking News
Hiring Reporter’s For more Information Contact Above Number 876 225 4007 . Program producer
Home / Breaking News / ರಂಗೇರಿದ ಚುನಾವಣಾ ಕಣ: ಭಯದ ವಾತಾವರಣದಲ್ಲಿ ಬಿಜೆಪಿ.

ರಂಗೇರಿದ ಚುನಾವಣಾ ಕಣ: ಭಯದ ವಾತಾವರಣದಲ್ಲಿ ಬಿಜೆಪಿ.

ಕರ್ನಾಟಕ: ರಾಜ್ಯದಲ್ಲಿ 15 ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯುತ್ತಿದೆ. ನಾಮಪತ್ರ ಸಲ್ಲಿಕೆ ಮುಗಿಯುವುದರೊಂದಿಗೆ ಉಪ ಚುನಾವಣಾ ಅಖಾಡ ರಂಗೇರಿದೆ.
ಆಡಳಿತ ಪಕ್ಷ ಬಿಜೆಪಿಗೆ ಅನೇಕ ಕ್ಷೇತ್ರಗಳಲ್ಲಿ ಬಂಡಾಯದ ಬಿಸಿ ತಟ್ಟಿದೆ. ಹೊಸಕೋಟೆ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಶರತ್ ಬಚ್ಚೇಗೌಡ ನಾಮಪತ್ರ ವಾಪಸ್ ಪಡೆಯುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. ಹೀಗಾಗಿ ಅವರನ್ನು ಪಕ್ಷದಿಂದ ಉಚ್ಚಾಟಿಸಲು ನಾಯಕರು ಕ್ರಮಕೈಗೊಂಡಿದ್ದಾರೆ. ಶರತ್ ಬಚ್ಚೇಗೌಡರ ತಂದೆ ಸಂಸದ ಬಿ.ಎನ್. ಬಚ್ಚೆಗೌಡರ ವಿರುದ್ಧವೂ ಶಿಸ್ತು ಕ್ರಮಕ್ಕೆ ಶಿಫಾರಸು ಮಾಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
ಹೊಸಕೋಟೆ ಜೊತೆಗೆ ವಿಜಯನಗರ ಕ್ಷೇತ್ರದಲ್ಲಿ ಬಂಡಾಯದ ಬಿಸಿ ತಟ್ಟಿದೆ. ಬಿಜೆಪಿ ಅಭ್ಯರ್ಥಿ ಆನಂದ್ ಸಿಂಗ್ ಎದುರು ಜಿಲ್ಲಾ ಪಂಚಾಯಿತಿ ಸದಸ್ಯ ಕವಿರಾಜ ಅರಸ್ ಪಕ್ಷೇತರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದಾರೆ.
ಗೋಕಾಕ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ್ ಜಾರಕಿಹೊಳಿ ವಿರುದ್ಧ ಬಂಡಾಯ ಸಾರಿದ ಅಶೋಕ್ ಪೂಜಾರಿ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿದಿದ್ದಾರೆ.
ಅಥಣಿ ಕ್ಷೇತ್ರದಲ್ಲಿ ಮಹೇಶ್ ಕುಮಟಳ್ಳಿ ಬಿಜೆಪಿ ಅಭ್ಯರ್ಥಿಯಾಗಿದ್ದು, ಡಿಸಿಎಂ ಲಕ್ಷ್ಮಣ ಸವದಿ ಆಪ್ತ, ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಗುರು ದಾಶ್ಯಾಳ ಜೆಡಿಎಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿರುವುದು ಕುತೂಹಲಕ್ಕೆ ಕಾರಣವಾಗಿದೆ.
ಸೋಮವಾರ ನಾಮಪತ್ರ ಸಲ್ಲಿಕೆ ಅವಧಿ ಮುಕ್ತಾಯವಾದ ಬೆನ್ನಲ್ಲೇ ಬಿಜೆಪಿಗೆ ಬಂಡಾಯದ ಬಿಸಿ ತಟ್ಟಿದೆ. ಗುರುವಾರ ನಾಮಪತ್ರ ವಾಪಸ್ ಗೆ ಕೊನೆಯ ದಿನವಾಗಿದ್ದು, ನಂತರದಲ್ಲಿ ಬಂಡಾಯ ಅಭ್ಯರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳಲು ಬಿಜೆಪಿ ನಾಯಕರು ಮುಂದಾಗಿದ್ದಾರೆ.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!