Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕರ್ನಾಟಕ / Rani Channamma’s bravery is a role model for the younger generation: Minister Sasikala Jolle

Rani Channamma’s bravery is a role model for the younger generation: Minister Sasikala Jolle

ಬೆಳಗಾವಿ:- ಕಿತ್ತೂರು ರಾಣಿ ಚನ್ನಮ ಹಾಗೂ ಸಂಗೊಳ್ಳಿ ರಾಯಣ್ಣ ಅವರ ಆದರ್ಶಗಳು, ಶೌರ್ಯವು ಇಂದಿನ ಹಾಗೂ ನಮ್ಮ ಮುಂದಿನ ಪಿಳಿಗೆಗೆ ಮಾದರಿಯಾಗಬೇಕಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆಯಾದ ಶಶಿಕಲಾ ಜೊಲ್ಲೆ ಅವರು ಹೇಳಿದರು.
ಜಿಲ್ಲಾಡಳಿತ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಅವರ ಸಂಯುಕ್ತ ಆಶ್ರಯದಲ್ಲಿ ಕಾಕತಿ ಗ್ರಾಮದಲ್ಲಿ ಇಂದು ನಡೆದ ಕಿತ್ತೂರ ರಾಣಿ ಚನ್ನಮ್ಮ ಮೂರ್ತಿ ಪೂಜೆ ಸಮಾರಂಭದಲ್ಲಿ ಅವರು ಮಾತನಾಡಿದರು.
ಧೈರ್ಯ ಮತ್ತು ಸಾಹಸದಲ್ಲಿ ಕಿತ್ತೂರ ರಾಣಿ ಚನ್ನಮ್ಮ ನಾಡಿನ ಮಹಿಳೆಯರಿಗೆ ಸ್ಪೂರ್ತಿಯಾಗಿದ್ದಾರೆ.
ಕಾಕತಿ ಗ್ರಾಮದಲ್ಲಿ ಜನಿಸಿದ ಚನ್ನಮ್ಮ ಸ್ವಾತಂತ್ರ್ಯದ ರಣಕಹಳೆಯನ್ನು ಊದಲು ತಂದೆ ತಾಯಿ ಪ್ರಮುಖ ಕಾರಣರಾಗಿದ್ದಾರೆ. ಬ್ರಿಟಿಷ್ ರ ವಿರುದ್ಧ ಹೋರಾಡಿದ ದಿಟ್ಟ ಮಹಿಳೆ ಚನ್ನಮ್ಮಳ ವೀರತನವನ್ನು , ಸಂಗೊಳ್ಳಿ ರಾಯಣ್ಣ ಪ್ರಾಮಾಣಿಕತೆಯನ್ನು ನಾಡಿನ ಪ್ರತಿಯೊಂದು ಮನೆಯ ಮಕ್ಕಳಿಗೂ ತಿಳಿಸಬೇಕು ಎಂದು ಹೇಳಿದರು.
ಚನ್ನಮ್ಮ ಆದರ್ಶಗಳನ್ನು ಪ್ರತಿಯೊಬ್ಬ ಮಹಿಳೆಯರು ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ತಮ್ಮ ಉತ್ತಮ ಜೀವನವನ್ನು ನಡೆಸಬೇಕು. ಅದಕ್ಕಾಗಿ ನಾನು ಸಹ ಅವರ ಒಳ್ಳೆಯತನವನ್ನು ನನ್ನ ಜೀವನದಲ್ಲಿ ಅಳವಡಿಸಿಕೊಂಡು ಮುನ್ನಡೆಯುತ್ತಿದ್ದೇನೆ. ತನ್ನ ಪ್ರಜೆಗಳ ಶಾಂತಿ ಸುಖಕ್ಕೊಸ್ಕರ ತನ್ನ ಪ್ರಾಣದ ಹಂಗು ತೊರೆದು ಹೋರಾಡಿದ ದಿಟ್ಟ ಮಹಿಳೆ ವೀರ ರಾಣಿ ಕಿತ್ತೂರ ಚನ್ನಮ್ಮ ಹಾಗಾಗಿ ಪ್ರತಿಯೊಂದು ಮನೆಯಲ್ಲಿ ಚನ್ನಮ್ಮರಂತಹ ಮಗಳು ರಾಯಣ್ಣ ರಂತಹ ಮಗ ಜನಿಸಲಿ ಎಂದರು.
ಅಧ್ಯಕ್ಷತೆ ವಹಿಸಿದ್ದ ಮಾಜಿ ಸಚಿವರು ಹಾಗೂ ಯಮಕನಮರಡಿ ಕ್ಷೇತ್ರದ ಶಾಸಕರಾದ ಸತೀಶ ಜಾರಕಿಹೋಳಿ ಅವರು ಮಾತನಾಡಿ, ಪ್ರತಿ ವರ್ಷವು ಕೂಡ ಕಾಕತಿಯಲ್ಲಿ ಚನ್ನಮ್ಮನ ಮೂರ್ತಿಯ ಪೂಜೆಯ ಬಳಿಕ ಕಿತ್ತೂರಿನಲ್ಲಿ ಸಂಭ್ರಮದಿಂದ ಉತ್ಸವ ಆಚರಿಸಲಾಗುತ್ತದೆ. ಇವತ್ತಿನ ದಿನಗಳಲ್ಲಿ ಕಲೆ, ಇತಿಹಾಸ ನಾಶವಾಗುತ್ತಿದ್ದು, ಅವುಗಳಿಗೆ ಮರು ಜೀವ ಕೊಡುವ ಉದ್ದೇಶದಿಂದ ಇಂತಹ ಕಾರ್ಯಕ್ರಮ ಮಾಡಲಾಗುತ್ತಿದೆ ಎಂದರು.
ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಸ್ವಾತಂತ್ರ್ಯ ಕಿಚ್ಚು ಹಚ್ಚಿದ ರಾಣಿ ಚನ್ನಮ್ಮರ ಆದರ್ಶಗಳ ತಿಳಿಸುವ ಕಾರ್ಯಗಳು ಹಲವು ವರ್ಷಗಳಿಂದ ನಡೆಯುತ್ತಿವೆ ಎಂದರು.
ಊರಿನ ಹಿರಿಯರು ಇಲ್ಲಿ ಅಗತ್ಯವಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ನಮ್ಮ ಗಮನಕ್ಕೆ ತಂದಿದ್ದು, ಅವುಗಳನ್ನು ಸರ್ಕಾರದ ಮುಖಾಂತರ ಜಿಲ್ಲಾ ಮಟ್ಟದಲ್ಲಿ ಅನುಮೊದನೆ ಕೊಡುವ ಕೆಲಸವನ್ನು ಮಾಡಲಾಗುತ್ತದೆ ಎಂದರು.
ಇದೇ ವೇಳೆಯಲ್ಲಿ ಚನ್ನಮ್ಮನ ವಂಶಸ್ಥರಾದ ಬಾಬಾಸಾಹೇಬ್ ದೇಸಾಯಿ, ಪ್ರಭುಲಿಂಗ ದೇಸಾಯಿ ಹಾಗೂ ಹಿರಿಯ ಅಧಿಕಾರಿಗಳು, ಊರಿನ ಗಣ್ಯರುಗಳನ್ನು ಸನ್ಮಾನಿಸಲಾಯಿತು.
ಬೆಳಗಾವಿ ತಹಶಿಲ್ದಾರರಾದ ಮಂಜುಳಾ ನಾಯಕ ಸ್ವಾಗತಿಸಿದರು. ಈ ಸಂದರ್ಭದಲ್ಲಿ ಕಾಕತಿ ಶಿವಪೂಜಾಮಠ ರಾಚಯ್ಯ ಮಹಾಸ್ವಾಮಿಗಳು, ಉದಯ ಮಹಾಸ್ವಾಮಿಗಳು, ಚಿಕ್ಕೋಡಿ ಲೋಕಸಭಾ ಸದಸ್ಯರಾದ ಅಣ್ಣಾಸಾಹೇಬ್ ಜೊಲ್ಲೆ, ಜಿಲ್ಲಾ ಪಂಚಾಯತ ಸದಸ್ಯರಾದ ಸಿದನಗೌಡ ಸುಣಗಾರ, ತಾಲ್ಲೂಕು ಪಂಚಾಯತ ಸದಸ್ಯರಾದ ಯಲ್ಲಪ್ಪ ಕೊಳೆಕರ, ಕಾಕತಿ ಗ್ರಾಮ ಪಂಚಾಯತ ಅಧ್ಯಕ್ಷರಾದ ಸುಮನ ಶವರಾಯಿ ಶಾಪೂರಕರ, ಡಾ. ಡಿ ಸಿ ಪಾಟೀಲ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

Share

About solaragoppa

Check Also

ವಿನಯ ಕುಲಕರ್ಣಿ ಬಂಧನ-ರಾಜಕೀಯ ಪ್ರೇರಿತ: ಬಿ.ಕೆ.ಹರಿಪ್ರಸಾದ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಬಂಧನ ಮಾಡಿದ್ದು ರಾಜಕೀಯ ದುರುದ್ದೇಶದಿಂದ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದರು. …

Leave a Reply

Your email address will not be published. Required fields are marked *

error: Content is protected !!