Hiring Reporter’s For more Information Contact Above Number 876 225 4007 . Program producer
Home / Breaking News / ರಾಯಣ್ಣ ಪುತ್ಥಳಿ ವಿವಾದ: ಪೊಲೀಸರ ಲಾಠಿ ಚಾರ್ಜ್

ರಾಯಣ್ಣ ಪುತ್ಥಳಿ ವಿವಾದ: ಪೊಲೀಸರ ಲಾಠಿ ಚಾರ್ಜ್

Spread the love

ಬೆಳಗಾವಿ: ರಾಯಣ್ಣ ಪುತ್ಥಳಿ ಪ್ರತಿಷ್ಠಾಪನೆ ವಿಚಾರಕ್ಕೆ ಬೆಳಗಾವಿಯಲ್ಲಿ ಹೋರಾಟ ಭುಗಿಲೆದ್ದಿದೆ. ಮಧ್ಯರಾತ್ರಿ ಕರ್ನಾಟಕ ರಕ್ಷಣಾ ವೇದಿಕೆ ಬೆಳಗಾವಿ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ನೇತೃತ್ವದಲ್ಲಿ ರಾಯಣ್ಣ ಮೂರ್ತಿ ಪ್ರತಿಷ್ಠಾಪನೆ ಮಾಡಿದ್ದು, ಸಂಗೊಳ್ಳಿ ರಾಯಣ್ಣ ಪ್ರತಿಮೆ ಎದುರು ಶಿವಾಜಿ ಪ್ರತಿಮೆ ಪ್ರತಿಷ್ಠಾಪನೆಗೆ ಯತ್ನಿಸಿದ ಘಟನೆಯೂ ನಡೆದಿದೆ.

ಇದೇ ವಿಚಾರವಾಗಿ ಕನ್ನಡ ಸಂಘಟನೆ ಕಾರ್ಯಕರ್ತರ ಮೇಲೆ ಕಲ್ಲು ತೂರಿದ ಎಂಇಎಸ್ ಕಾರ್ಯಕರ್ತರ ಮೇಲೆ ನಗರ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ. ಸ್ಥಳದಲ್ಲಿ ಬಿಗುವಿನ ವಾತಾವರಣ ಸ್ಥಳಕ್ಕೆ ನಿರ್ಮಾಣವಾಗಿದ್ದು, ಒಂದು ಸಿಎಆರ್, ಡಿಎಆರ್ ತುಕಡಿ ಆಗಮಿಸಿದೆ.

ಸಂಗೊಳ್ಳಿ ರಾಯಣ್ಣ ಪುತ್ಥಳಿ ಮರುಸ್ಥಾಪನೆ ಬಳಿಕ ವಿಜಯೋತ್ಸವ ನಡೆಸಲು ಬೈಕ್ rally ಮೂಲಕ ತೆರಳುತ್ತಿದ್ದ ವೇಳೆ ಎಂಇಎಸ್ ಕಾರ್ಯಕರ್ತರು ಕನ್ನಡ ಸಂಘಟನೆ ಮೇಲೆ ಕಲ್ಲು ತೂರಾಟ ನಡೆಸಿದರು. ಪರಿಸ್ಥಿತಿ ಹತೋಟಿಗೆ ತರಲು ಎಂಇಎಸ್ ಕಾರ್ಯಕರ್ತರ ಮೇಲೆ ಪೊಲೀಸರು ಲಾಠಿಚಾರ್ಜ್ ಮಾಡಿದರು.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!