Hiring Reporter’s For more Information Contact Above Number 876 225 4007 . Program producer
Home / Breaking News / ಉತ್ತರ ಕರ್ನಾಟಕದಲ್ಲಿ ರೆಡ್ ಅಲರ್ಟ್​ ಘೋಷಣೆ

ಉತ್ತರ ಕರ್ನಾಟಕದಲ್ಲಿ ರೆಡ್ ಅಲರ್ಟ್​ ಘೋಷಣೆ

Spread the love

ಬೆಂಗಳೂರು: ಕರ್ನಾಟಕದ ಬಹುತೇಕ ಕಡೆ ಒಂದು ವಾರದಿಂದ ಭಾರೀ ಮಳೆಯಾಗುತ್ತಿದೆ. ಮಲೆನಾಡು, ಕರಾವಳಿ ಜಿಲ್ಲೆಗಳು, ಕೊಡಗು, ಉತ್ತರ ಕರ್ನಾಟಕದ ಕೆಲವು ಭಾಗಗಳಲ್ಲಿಯೂ ಮಳೆಯ ಪ್ರಮಾಣ ಹೆಚ್ಚಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದಾಗಿ ಇಂದು ಮತ್ತು ನಾಳೆ ಮಳೆ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಭಾರೀ ಮಳೆಯಿಂದ ಉತ್ತರ ಕರ್ನಾಟಕದ ಬಹುತೇಕ ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ.

ಇಂದು ಮತ್ತು ನಾಳೆ ಕೂಡ ವಿಜಯಪುರ, ಬಾಗಲಕೋಟೆ, ಬೆಳಗಾವಿ, ಕಲಬುರ್ಗಿ, ಬೀದರ್, ಯಾದಗಿರಿ, ರಾಯಚೂರಿನಲ್ಲಿ ವಿಪರೀತ ಮಳೆಯಾಗುವ ಸಾಧ್ಯತೆ ಇರುವುದರಿಂದ ಜಿಲ್ಲಾಡಳಿತಗಳಿಂದ ರೆಡ್ ಅಲರ್ಟ್​ ಘೋಷಿಸಲಾಗಿದೆ. ಹಾಗೇ, ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳು, ಮಲೆನಾಡಿನ ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗಿನಲ್ಲಿಯೂ ಇನ್ನೆರಡು ದಿನ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇರುವುದರಿಂದ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ.

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!