Hiring Reporter’s For more Information Contact Above Number 876 225 4007 . Program producer
Home / Breaking News / ಅತಿಥಿ ಶಿಕ್ಷಕರಿಗೆ ಪರಿಹಾರ ಪ್ಯಾಕೇಜ್ ಘೋಷಣೆ ಮಾಡುವಂತೆ ಆಗ್ರಹ.

ಅತಿಥಿ ಶಿಕ್ಷಕರಿಗೆ ಪರಿಹಾರ ಪ್ಯಾಕೇಜ್ ಘೋಷಣೆ ಮಾಡುವಂತೆ ಆಗ್ರಹ.

Spread the love

ಹುಬ್ಬಳ್ಳಿ- ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯಡಿ ಬರುವ
ಶಾಲೆಗಳ ಶಿಕ್ಷಕರು ಕೋವೀಡ್ ನಿಂದಾಗಿ ಸಂಬಳವಿಲ್ಲದೇ ಸಂಕಷ್ಟದಲ್ಲಿದ್ದು ಕೂಡಲೇ ಸರ್ಕಾರ ಕೋವಿಡ್ ವಿಶೇಷ ಪ್ಯಾಕೇಜ್ ಜೊತೆಗೆ ಉದ್ಯೋಗ ಭದ್ರತೆ ನೀಡಲು ಆಗ್ರಹಿಸಿ ಅತಿಥಿ ಶಿಕ್ಷಕರ ಹೋರಾಟ ಸಮಿತಿಯ ಆಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ ಕಾರ್ಯಕರ್ತರು ಆಗ್ರಹಿಸಿದರು.

ಹುಬ್ಬಳ್ಳಿಯ ತಹಸೀಲ್ದಾರ ಕಚೇರಿ ಮುಂದೆ ಕೇಲ ಸಮಯ ಪ್ರತಿಭಟನೆ ನಡೆಸಿದರು.ಶಿಕ್ಷಕರ ಬಾಕಿ ವೇತನ ಕೂಡಲೇ ಬಿಡುಗಡೆ ಮಾಡಿ ಮತ್ತು ವಿಶೇಷ ಪ್ಯಾಕೇಜ್‌ ಘೋಷಿಸುವಂತೆ ಒತ್ತಾಯಿಸಿ ಶಿಕ್ಷಕರೇ ತಮ್ಮ ಕೈಯಿಂದಲೇ ಖರ್ಚು ಭರಿಸುತ್ತ ಆನ್‌ ಲೈನ್‌ ತರಗತಿಗಳನ್ನು ಕೂಡ ನಿಭಾಯಿಸುತ್ತಿದ್ದಾರೆ.
ಕೋವಿಡ್‌-19 ಸಾಂಕ್ರಾಮಿಕರೋಗದಿಂದಾಗಿ ಲಾಕ್‌ ಡೌನ್‌ ಬಂದು ಅತಿಥಿ ಉಪನ್ಯಾಸಕರಗೆ ಸಮಸ್ಯೆ ಆಗಿದ್ದು ಇವತ್ತಿನ ಬೆಲೆ ಏರಿಕೆಯ ಪರಿಸ್ಥಿತಿಯಲ್ಲಿ ನೀಡುತ್ತಿರುವ ಸಂಬಳ ಸಾಕಾಗುವುದಿಲ್ಲ.

ಹಿಂದಿನಿಂದಲೂ ಸರಕಾರಗಳು ವೇತನದಲ್ಲಿ ತಾರತಮ್ಯ ಮಾಡುತ್ತ ಬಂದಿವೆ. ದುಡಿಯುತ್ತಿರುವ ಅತಿಥಿ ಶಿಕ್ಷಕರಿಗೆ ಇಲ್ಲಿಯವರೆಗೆ ಸಂಬಳ ನೀಡಿಲ್ಲ.ಆದ್ದರಿಂದ ಕೂಡಲೇ ಸರಕಾರ ಸಂಬಳ ನೀಡುವುದರ ಬಗ್ಗೆ ಆದಷ್ಟು ಬೇಗ ನಿರ್ಧಾರ ಕೈಗೊಳ್ಳಬೇಕು ಎಂದು ತಹಶಿಲ್ದಾರರ ಮುಖಾಂತರ ಮನವಿ ಮಾಡಿದರು.

Check Also

ತಮಿಳು ಚಿತ್ರರಂಗದ ಖ್ಯಾತ ನಟ ಆತ್ಮಹತ್ಯೆಗೆ ಶರಣು

Spread the loveಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳು ಚಿತ್ರರಂಗದ ಉದಯೋನ್ಮುಖ ನಟ ತೆನ್ನರಸು ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!