Hiring Reporter’s For more Information Contact Above Number 876 225 4007 . Program producer
Home / Breaking News / ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ನಾಗೇಶ್ ಬಾಬು ಇನ್ನಿಲ್ಲ

ಸ್ಯಾಂಡಲ್ ವುಡ್ ಹಿರಿಯ ನಿರ್ದೇಶಕ ನಾಗೇಶ್ ಬಾಬು ಇನ್ನಿಲ್ಲ

Spread the love

ಬೆಂಗಳೂರು: ಕನ್ನಡ ಚಿತ್ರರಂಗದ ಹಿರಿಯ ನಿರ್ದೇಶಕ ನಾಗೇಶ್ ಬಾಬು ಅನಾರೋಗ್ಯದಿಂದ ನಿಧನರಾಗಿದ್ದಾರೆ. 1957ರಲ್ಲಿ ಸಹಾಯಕ ನಿರ್ದೇಶಕರಾಗಿ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದ ನಾಗೇಶ್ ಬಾಬು 1970ರಲ್ಲಿ ‘ಅನಿರೀಕ್ಷಿತ’ ಎಂಬ ಚಿತ್ರದ ಮೂಲಕ ಪೂರ್ಣಪ್ರಮಾಣದಲ್ಲಿ ನಿರ್ದೇಶಕರಾಗಿ ಹಾಗೂ ನಿರ್ಮಾಪಕರಾಗಿಯೂ ಕಾರ್ಯ ನಿರ್ವಹಿಸಿದ್ದರು.

ನಾಗೇಶ್ ಬಾಬು ಅವರಿಗೆ 82 ವರ್ಷ ವಯಸ್ಸಾಗಿತ್ತು. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ನಾಗೇಶ್ ಬಾಬು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಿಸದೇ ಇಂದು ನಾಗೇಶ್ ಬಾಬು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಪ್ರೇಮದ ಪುತ್ರಿ, ಪ್ರತಿಮಾ, ಬೆಟ್ಟದ ಕಳ್ಳ, ತೂಗುದೀಪ ಮೊದಲಾದ ಚಿತ್ರಗಳಿಗೆ ಸಹಾಯಕ ನಿರ್ದೇಶಕರಾಗಿ, ಸಂಭಾಷಣಾಕಾರರಾಗಿ ಕೆಲಸ ಮಾಡಿದ್ದರು ನಾಗೇಶ್.
ಸ್ಥಿರಚಿತ್ರ ಛಾಯಾಗ್ರಹಣ ವಿಭಾಗದಲ್ಲಿ ಕನ್ನಡ ಚಿತ್ರರಂಗಕ್ಕೆ ನಾಗೇಶ್ ಬಾಬು ಕೊಡುಗೆ ಅಪಾರ. ಬೆಂಗಳೂರಿನ ಗಾಂಧಿನಗರದಲ್ಲಿ 1972ರಲ್ಲಿ ಅವರು ಆರಂಭಿಸಿದ್ದ ಪ್ರಗತಿ ಸ್ಟುಡಿಯೋ ಕನ್ನಡ ಚಿತ್ರರಂಗದ ಸುಮಾರು 350ಕ್ಕೂ ಹೆಚ್ಚು ಚಿತ್ರಗಳಿಗೆ ಸ್ಥಿರಚಿತ್ರ ಛಾಯಾಗ್ರಹಣ ಮಾಡಿದೆ. 2009ರಲ್ಲಿ ನಾಗೇಶ್ ಬಾಬು ತಯಾರಿಸಿದ ತತ್ವಮಸಿ ಯು ಆರ್ ದಟ್ ಎಂಬ ಇಂಗ್ಲೀಷ್ ಸಾಕ್ಷ್ಯ ಚಿತ್ರ ಅಂತರಾಷ್ಟ್ರೀಯ ಮಟ್ಟದಲ್ಲಿ ಹೆಸರಾಗಿತ್ತು. ಹಲವು ವರ್ಷಗಳ ಕಾಲ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯಲ್ಲೂ ಕಾರ್ಯನಿರ್ವಹಿಸಿದ್ದರು.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!