Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಲಖನ್ ಬಳಿಕ ನಾಮಪತ್ರ ಸಲ್ಲಿಸಿ ಅಚ್ಚರಿ ಮೂಡಿಸಿದ ಸತೀಶ್ ಜಾರಕಿಹೊಳಿ.

ಲಖನ್ ಬಳಿಕ ನಾಮಪತ್ರ ಸಲ್ಲಿಸಿ ಅಚ್ಚರಿ ಮೂಡಿಸಿದ ಸತೀಶ್ ಜಾರಕಿಹೊಳಿ.

ಗೋಕಾಕ್; 15 ಕ್ಷೇತ್ರಗಳಿಗೆ ಡಿ.5ರಂದು ನಡೆಯಲಿರುವ ಉಪಚುನಾವಣೆ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಸೋಮವಾರ ಕಡೇ ದಿನವಾಗಿದ್ದು, ಅಭ್ಯರ್ಥಿಗಳು ಭರ್ಜರಿ ಬಲಪ್ರದರ್ಶನದೊಂದಿಗೆ ನಾಮಪತ್ರ ಸಲ್ಲಿಸುತ್ತಿದ್ದಾರೆ. ಆದರೆ ಗೋಕಾಕ್ ನಲ್ಲಿ ಕೊನೇ ಕ್ಷಣದ ಅಚ್ಚರಿ ಬೆಳವಣಿಗೆ ಎಂಬಂತೆ ಕಾಂಗ್ರೆಸ್ ನಿಂದ ಸತೀಶ್ ಜಾರಕಿಹೊಳಿ ಕೂಡಾ ನಾಮಪತ್ರ ಸಲ್ಲಿಸಿದ್ದಾರೆ.

ಗೋಕಾಕ್ ಕ್ಷೇತ್ರದಲ್ಲಿ ಕಾಂಗ್ರೆಸ್ ನಿಂದ ಲಖನ್ ಜಾರಕಿಹೊಳಿ ಸೋಮವಾರ ನಾಮಪತ್ರ ಸಲ್ಲಿಸಿದ್ದರು. ನಂತರ ಸತೀಶ್ ಜಾರಕಿಹೊಳಿ ಪ್ರತ್ಯೇಕವಾಗಿ ನಾಮಪತ್ರ ಸಲ್ಲಿಸಿರುವುದು ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ.

ನನಗೆ ಟಿಕೆಟ್ ತಪ್ಪಿಸಲು ರಮೇಶ್ ಜಾರಕಿಹೊಳಿ ಗೇಮ್ ಪ್ಲಾನ್ ಮಾಡಿದ್ದರು ಎಂದು ಗೋಕಾಕ್ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಲಖನ್ ಜಾರಕಿಹೊಳಿ ಆರೋಪಿಸಿದ್ದಾರೆ.

Share

About Vijayalakshmi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!