Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಬಿಪಿಎಲ್ ಕಾರ್ಡುದಾರರಿಗೆ ಶಾಕಿಂಗ್ ನ್ಯೂಸ್.

ಬಿಪಿಎಲ್ ಕಾರ್ಡುದಾರರಿಗೆ ಶಾಕಿಂಗ್ ನ್ಯೂಸ್.

ಬೆಂಗಳೂರು: ಅನ್ನಭಾಗ್ಯ ಯೋಜನೆ ಫಲಾನುಭವಿಗಳಿಗೆ ಶಾಕಿಂಗ್ ನ್ಯೂಸ್ ಇಲ್ಲಿದೆ. ಅನ್ನಭಾಗ್ಯ ಯೋಜನೆಯಡಿ ಬಿಪಿಎಲ್ ಕಾರ್ಡ್ ದಾರರಿಗೆ ನೀಡುತ್ತಿರುವ ಅಕ್ಕಿ ಪ್ರಮಾಣವನ್ನು ಕಡಿತಗೊಳಿಸಲಾಗುವುದು ಎನ್ನಲಾಗಿದೆ.

ಬಿಪಿಎಲ್ ಕಾರ್ಡ್ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೆ ನೀಡುತ್ತಿರುವ ಅಕ್ಕಿಯನ್ನು 7 ಕೆಜಿಯಿಂದ 5 ಕೆಜಿ ಗೆ ಇಳಿಸಲು ಸರ್ಕಾರ ಚಿಂತನೆ ನಡೆಸಿದೆ. ಆಹಾರ ಇಲಾಖೆ ಈ ಕುರಿತು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿದೆ.

ಕಡಿತಗೊಳಿಸುವ ಎರಡು ಕೆಜಿ ಅಕ್ಕಿ ಬದಲಿಗೆ ಒಂದು ಕೆಜಿ ಬೇಳೆ ವಿತರಿಸುವ ಚಿಂತನೆ ಇದೆ. ಕೆಲವೆಡೆ ನ್ಯಾಯಬೆಲೆ ಅಂಗಡಿಗಳಲ್ಲಿ ಬಿಪಿಎಲ್ ಕಾರ್ಡ್ ಪ್ರತಿ ಸದಸ್ಯರಿಗೆ 4ಕೆಜಿ ಅಕ್ಕಿ, 3 ಕೆಜಿ ರಾಗಿ ವಿತರಣೆ ಮಾಡಲಾಗುತ್ತಿದೆ. ಇದನ್ನು ಕಡಿತಗೊಳಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

Share

About Admin BIG TV NEWS

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!