Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಅಪಘಾತದಲ್ಲಿ ಸಾವನ್ನಪ್ಪಿದ 13 ಜನರಿಗೆ ಹೆದ್ದಾರಿಯಲ್ಲೇ ಶ್ರದ್ಧಾಂಜಲಿ ಸಲ್ಲಿಕೆ

ಅಪಘಾತದಲ್ಲಿ ಸಾವನ್ನಪ್ಪಿದ 13 ಜನರಿಗೆ ಹೆದ್ದಾರಿಯಲ್ಲೇ ಶ್ರದ್ಧಾಂಜಲಿ ಸಲ್ಲಿಕೆ

ಧಾರವಾಡ:ಜ.15 ರಂದು ಹುಬ್ಬಳ್ಳಿ, ಧಾರವಾಡ ಬೈಪಾಸ್ ರಸ್ತೆಯ ಇಟಿಗಟ್ಟಿ ಕ್ರಾಸ್ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ 13 ಜನರಿಗೆ ಹೆದ್ದಾರಿಯಲ್ಲೇ ಶ್ರದ್ಧಾಂಜಲಿ ಸಲ್ಲಿಸಲಾಯಿತು.ಪಿ.ಎಚ್.ನೀರಲಕೇರಿ, ಶ್ರೀಶೈಲಗೌಡ ಕಮತರ, ವಿವಿಧ ಕನ್ನಡಪರ ಸಂಘಟನೆಗಳ ನೇತೃತ್ವದಲ್ಲಿ ಈ ಕಾರ್ಯಕ್ರಮ ನಡೆಯಿತು.ಈ ಅಪಘಾತದಲ್ಲಿ ಸಾವನ್ನಪ್ಪಿದ ಹೆಣ್ಣು ಮಕ್ಕಳ ಕುಟುಂಬಸ್ಥರು ಕೂಡ ಧಾರವಾಡಕ್ಕೆ ಬಂದಿದ್ದು, ಧಾರವಾಡ ಜಿಲ್ಲಾಧಿಕಾರಿ ಕಚೇರಿಯಿಂದ ಅಪಘಾತವಾದ ಸ್ಥಳದವರೆಗೂ ಪಾದಯಾತ್ರೆ ನಡೆಸಿ ಅಲ್ಲಿ ಶ್ರದ್ಧಾಂಜಲಿ ಸಲ್ಲಿಸಿದರು.

ಈ ಬೈಪಾಸ್ ರಸ್ತೆ ಅಗಲೀಕರಣವಾಗಬೇಕು ಆರು ಲೈನ್ ರಸ್ತೆ ಇದಾಗಬೇಕು. ನಮ್ಮ ಕುಟುಂಬಕ್ಕಾದ ಅನ್ಯಾಯ ಬೇರೆ ಕುಟುಂಬಗಳಿಗೆ ಆಗುವುದು ಬೇಡ ಕೂಡಲೇ ಸರ್ಕಾರ ಈ ರಸ್ತೆ ಅಗಲೀಕರಣಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿ ಮೃತ ಹೆಣ್ಣುಮಕ್ಕಳ ಕುಟುಂಬಸ್ಥರು ದಾವಣಗೆರೆಯಿಂದ ಧಾರವಾಡಕ್ಕೆ ಬಂದು ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಸರ್ಕಾರದ ಗಮನಸೆಳೆದರು.

Share

About Shaikh BIG TV NEWS, Hubballi

Check Also

ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್‌ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ …

Leave a Reply

Your email address will not be published. Required fields are marked *

error: Content is protected !!