Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಸರ್ಕಾರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

ಸರ್ಕಾರಕ್ಕೆ ಪತ್ರ ಬರೆದ ಸಿದ್ದರಾಮಯ್ಯ

ಬೆಂಗಳೂರು: ಸರ್ಕಾರಿ ಉದ್ಯೋಗಗಳಿಗೆ ಆಯ್ಕೆಯಾಗಿರುವ ಕೆಲವು ಎಸ್ಸಿ-ಎಸ್ಟಿ ಅಭ್ಯರ್ಥಿಗಳಿಂದ ಜಾತಿ ಪರಿಶೀಲನೆ ಪ್ರಮಾಣಪತ್ರ ನೀಡುವ ಮೊದಲು ನಾಗರಿಕ ಹಕ್ಕು ಜಾರಿ ನಿರ್ದೇಶನಾಲಯದ ಜಾಗೃತ ಘಟಕದಿಂದ ವರದಿ ಕೇಳುವಂತೆ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಹೊರಡಿಸಿರುವ ಆದೇಶವನ್ನು ಹಿಂತೆಗೆದುಕೊಳ್ಳಬೇಕೆಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರಿಗೆ ಪತ್ರ ಬರೆದಿರುವ ಸಿದ್ದರಾಮಯ್ಯ, ಎಸ್ಸಿ-ಎಸ್ಟಿ ಅಭ್ಯರ್ಥಿಗಳನ್ನು ಗುರಿಯಾಗಿಟ್ಟುಕೊಂಡು ಆದೇಶ ಹೊರಡಿಸಲಾಗಿದೆ. ಹಲವು ವರ್ಷಗಳಿಂದ ಬಾಕಿ ಇರುವ ಕೇಸುಗಳನ್ನು ಬಗೆಹರಿಸಲು ನಾಗರಿಕ ಹಕ್ಕುಗಳ ಜಾರಿ ನಿರ್ದೇಶನಾಲಯಕ್ಕೆ ಸಾಧ್ಯವಾಗಿಲ್ಲ. ಅಂತಹುದರಲ್ಲಿ ಈಗ ಅಂತಹ ಸಂಸ್ಥೆಗೆ ಜಾತಿ ಪ್ರಮಾಣ ಪತ್ರ ನೀಡುವ ಕೆಲಸ ನೀಡಿದರೆ ಪ್ರಕ್ರಿಯೆ ಮತ್ತಷ್ಟು ವಿಳಂಬವಾಗುತ್ತದೆ ಎಂದು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

Share

About Admin BIG TV NEWS

Check Also

ಹಿರಿಯ ಅಧಿಕಾರಿ ಕಿರುಕುಳಕ್ಕೆ ಬೇಸತ್ತು ಡೆತ್ ನೋಟ್ ಬರೆದಿಟ್ಟು ವೈದ್ಯಕೀಯ ಸಿಬ್ಬಂದಿ ಆತ್ಮಹತ್ಯೆಗೆ ಯತ್ನ…!

ಹುಬ್ಬಳ್ಳಿ: ವೈದ್ಯಕೀಯ ಸಿಬ್ಬಂದಿಯೊಬ್ಬರು ಡೇತ್‌ ನೋಟ್ ಬರೆದಿಟ್ಟು, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಹುಬ್ಬಳ್ಳಿ ತಾಲೂಕಿನ ನೂಲ್ವಿಯ ಪ್ರಾಥಮಿಕ …

Leave a Reply

Your email address will not be published. Required fields are marked *

error: Content is protected !!