Hiring Reporter’s For more Information Contact Above Number 876 225 4007 . Program producer
Home / Breaking News / ಕೊರೊನಾ ಪರೀಕ್ಷೆಗೆ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

ಕೊರೊನಾ ಪರೀಕ್ಷೆಗೆ ಬಗ್ಗೆ ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಅಬ್ಬರ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸರ್ಕಾರದಿಂದ ಗುರುತಿಸಲ್ಪಡುವ ವ್ಯಕ್ತಿ ಕೊರೊನಾ ಪರೀಕ್ಷೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು. ಇಲ್ಲದಿದ್ದರೆ 50 ಸಾವಿರ ರೂ. ವರೆಗೆ ದಂಡ ಹಾಗೂ 6 ತಿಂಗಳಿಂದ 3 ವರ್ಷದವರೆಗೆ ಶಿಕ್ಷೆ ವಿಧಿಸಲು ಮುಂದಾಗಿದೆ.

ಈ ಬಗ್ಗೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ನಿರ್ದೇಶನಾಲಯ ಹೊಸ ಆದೇಶವನ್ನು ಹೊರಡಿಸಿದ್ದು, ಕೊರೊನಾ ದೃಢವಾಗಿರುವ ವ್ಯಕ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಿತರು ಕೋರೊನಾ ಪರೀಕ್ಷೆಗೆ ಒಳಪಡಬೇಕು ಎಂದು ತಿಳಿಸಿದೆ.

ಈ ಆದೇಶವನ್ನು ಕರ್ನಾಟಕ ಸಾಂಕ್ರಮಿಕ ರೋಗಿಗಳ ಸುಗ್ರೀವಾಜ್ಞೆ-2020 ರ 4 ನೇ ವಿಧಿಯಡಿ ವಿಧಿಸಲಾಗಿದ್ದು, ಕೋವಿಡ್ ದೃಢವಾಗಿರುವ ವ್ಯಕ್ತಿಯ ಪ್ರಾಥಮಿಕ ಮತ್ತು ದ್ವಿತೀಯ ಹಂತದ ಸಂಪರ್ಕಿತರು ಜ್ವರದ ಲಕ್ಷಣಗಳಿರುವ ವ್ಯಕ್ತಿಗಳು ಉಸಿರಾಟ ಸಂಬಂಧಿ ಸಮಸ್ಯೆಗಳಿಂದ ಬಳಲುತ್ತಿರುವವರು ಕೋವಿಡ್ 19 ಚಿಕಿತ್ಸೆಯಲ್ಲಿ ತೊಡಗಿರುವ ವೈದ್ಯರು, ಸಿಬ್ಬಂದಿ, ಕಂಟೈನ್ ಮೆಂಟ್ ಮತ್ತು ಬಫರ್ ವಲಯದಲ್ಲಿನ ವ್ಯಕ್ತಿಗಳಿಗೆ ಕೊರೊನಾ ಪರೀಕ್ಷೆ ಕಡ್ಡಾಯಗೊಳಿಸಲಾಗಿದೆ.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!