Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಭಾರತ ವಿರುದ್ಧದ ಏಕದಿನ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ.

ಭಾರತ ವಿರುದ್ಧದ ಏಕದಿನ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟ.

Spread the love

ಜೋಹಾನ್ಸ್ ಬರ್ಗ್, ಮಾರ್ಚ್ 02: ಭಾರತ ವಿರುದ್ಧದ ಏಕದಿನ ಸರಣಿಗೆ ದಕ್ಷಿಣ ಆಫ್ರಿಕಾ ತಂಡ ಪ್ರಕಟಿಸಲಾಗಿದೆ. ಮಾಜಿ ನಾಯಕ ಫಾಫ್ ಡುಪ್ಲೆಸಿಸ್ ಹಾಗೂ ರಾಸ್ಸಿ ವಾನ್ ಡರ್ ಡುಸ್ಸೆನ್ ತಂಡಕ್ಕೆ ಮರಳಿದ್ದಾರೆ. 15 ಮಂದಿ ಸದಸ್ಯರ ತಂಡಕ್ಕೆ ಡಿಕಾಕ್ ನಾಯಕರಾಗಿದ್ದಾರೆ.

ಭಾರತ ವಿರುದ್ಧ ದಕ್ಷಿಣ ಆಫ್ರಿಕಾ ಮೂರು ಪಂದ್ಯಗಳ ಏಕದಿನ ಸರಣಿ ಆಡಲಿದ್ದು, ಮಾರ್ಚ್ 12ರಿಂದ ಮೊದಲ ಪಂದ್ಯ ನಡೆಯಲಿದೆ. ಮೊದಲ ಪಂದ್ಯ ಧರ್ಮಶಾಲಾದಲ್ಲಿ, ಎರಡನೇ ಹಾಗೂ ಮೂರನೇ ಪಂದ್ಯ ಕ್ರಮವಾಗಿ ಲಕ್ನೋ ಹಾಗೂ ಕೋಲ್ಕತ್ತಾದಲ್ಲಿ ನಡೆಯಲಿದೆ.

ಜಾನೆಮನ್ ಮಲಾನ್ ತಂಡದಿಂದ ಕೈಬಿಡಲಾಗಿದೆ. ಸ್ಪಿನ್ನರ್ ಷಂಶಿ ತಂಡದಿಂದ ಹೊರಗುಳಿದಿದ್ದಾರೆ. ಷಂಶಿ ಪತ್ನಿ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಜಾರ್ಜ್ ಲಿಂಡೆ ಮೊದಲ ಬಾರಿಗೆ ಏಕದಿನ ತಂಡಕ್ಕೆ ಆಯ್ಕೆಯಾಗಿದ್ದಾರೆ. ಕಳೆದ ವರ್ಷ ಭಾರತ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಆಡಿದ್ದ ಲಿಂಡೆ ಉತ್ತಮ ಪ್ರದರ್ಶನ ನೀಡಿದ್ದರು.

Check Also

Featured Video Play Icon

ಯರಗುಪ್ಪಿ ಮುಖ್ಯ ರಸ್ಥೆಯಲ್ಲಿ ಗುಂಡಿಗಳದೇ ಕಾರುಬಾರು

Spread the love

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!