Breaking News
Home / Breaking News / ರಾಜಕೀಯ ತಿರುವು ಪಡೆಯಲಿದೆಯೇ ಧರ್ಮೆಗೌಡರ ಸೂಸೈಡ್..

ರಾಜಕೀಯ ತಿರುವು ಪಡೆಯಲಿದೆಯೇ ಧರ್ಮೆಗೌಡರ ಸೂಸೈಡ್..

Spread the love

ಬೆಂಗಳೂರು : ವಿಧಾನಪರಿಷತ್ ಉಪಸಭಾಪತಿ ಎಸ್.ಎಲ್. ಧರ್ಮೇಗೌಡ (65) ರೈಲಿಗೆ ತಲೆಕೊಟ್ಟು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಜಿಲ್ಲೆಯ ಕಡೂರು ತಾಲೂಕು ಮಂಗೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ಸದ್ಯ ಉಪಸಭಾಪತಿ ಎಸ್.ಎಲ್ ಧರ್ಮೇಗೌಡ ಅವರ ಆತ್ಮಹತ್ಯೆಗೂ ಮುನ್ನ ಡೆತ್ ನೋಟ್ ಬರೆದಿಟ್ಟಿದ್ದಾರೆ ಎನ್ನಲಾಗಿದ್ದು, ಡೆಟ್ ನೋಟ್ ನಲ್ಲಿ ತಮ್ಮ ಆತ್ಮಹತ್ಯೆಗೆ ಕಾರಣ ಬಹಿರಂಗ ಪಡಿಸಿದ್ದಾರೆ ಎನ್ನಲಾಗಿದೆ.

ಕೆಲದಿನಗಳ ಹಿಂದೆ ವಿಧಾನಪರಿಷತ್ ನಲ್ಲಿ ನಡೆದ ಆ ಒಂದು ಘಟನೆಯೇ ಆತ್ಮಹತ್ಯೆಗೆ ಕಾರಣ ಎನ್ನಲಾಗಿದ್ದು, ವಿಧಾನ ಪರಿಷತ್ ಅಧಿವೇಶನದಲ್ಲಿ ಸಭಾಪತಿ ಪೀಠದಲ್ಲಿ ಉಪಸಭಾಪತಿ ಧರ್ಮೇಗೌಡರು ಕುಳಿತುಕೊಳ್ಳುತ್ತಿದ್ದಂತೆ ಕಾಂಗ್ರೆಸ್ ಸದಸ್ಯರು ವಿರೋಧ ವ್ಯಕ್ತಪಡಿಸಿದ್ದರು. ಜೊತೆಗೆ ಧರ್ಮೇಗೌಡರನ್ನು ಎಳೆದಾಡಿದ್ದರು.

ಇದು ಧರ್ಮೇಗೌಡರಿಗೆ ತೀವ್ರ ಮುಜುಗರವನ್ನುಂಟು ಮಾಡಿತ್ತು. ಹೀಗಾಗಿ ಅವರು ಈ ನಿರ್ಧಾರಕ್ಕೆ ಬಂದಿದ್ದರಾ ಎನ್ನುವ ಅನುಮಾನ ಶುರುವಾಗಿದೆ.

About Admin BIG TV NEWS

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Spread the love

Leave a Reply

Your email address will not be published. Required fields are marked *

error: Content is protected !!