Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಹಿಂದೂಪರ ಸಂಘಟನೆಗಳ ಜೊತೆ ಬೀದಿಗಿಳಿದು ಹೋರಾಟಕ್ಕೆ ಬೆಂಬಲ ಸೂಚಿಸಿದ ಶ್ರೀಗಳು.

ಹಿಂದೂಪರ ಸಂಘಟನೆಗಳ ಜೊತೆ ಬೀದಿಗಿಳಿದು ಹೋರಾಟಕ್ಕೆ ಬೆಂಬಲ ಸೂಚಿಸಿದ ಶ್ರೀಗಳು.

 

ಮಂಡ್ಯ; ಆಲಂಬಾಡಿಕಾವಲು ಗ್ರಾಮದಲ್ಲಿ ಕಾನೂನು ಬಾಹಿರವಾಗಿ ಪೆರೇಡ್ ನಡೆಸುತ್ತಿದ್ದ ಪಿ.ಎಫ್.ಐ ಸಂಘಟನೆಯ ಕಾರ್ಯಕರ್ತರ ವಿರುದ್ಧ ಸಿಬಿಐ ತನಿಖೆ ನಡೆಸುವಂತೆ ಹಾಗೂ ದೇಶದ್ರೋಹಿ ಕೃತ್ಯವನ್ನು ನಡೆಸುತ್ತಿದ್ದ ವಿದ್ರೋಹಿಗಳನ್ನು ಕಿಡಿಗೇಡಿಗಳನ್ನು ಬಂಧಿಸಿ ಕಾನೂನು ಕ್ರಮ ಜರುಗಿಸಬೇಕು. ಪ್ರಕರಣವನ್ನು ಸಿಬಿಐ ಗೆ ಒಪ್ಪಿಸಬೇಕು ಹಾಗೂ ಪಿ.ಎಫ್.ಐ, ಎಸ್.ಡಿ.ಪಿ.ಐ ಮತ್ತು ಎಸ್.ಎಫ್.ಐ ಸಂಘಟನೆಗಳನ್ನು ನಿಷೇಧಿಸಬೇಕು ಎಂದು ಬಾಳೆಹೊನ್ನೂರು ಶಾಖಾಮಠದ ಶ್ರೀ ಗಂಗಾಧರ ಶಿವಾಚಾರ್ಯ, ಮತ್ತು ಮಂಡ್ಯ ಪಾಂಡವಪುರ ಬೇಬಿ ಬೆಟ್ಟದ ಮಠದ ಗುರುಸಿದ್ದೇಶ್ವರ ಮಹಾಸ್ವಾಮಿಜಿ ಆಗ್ರಹಿಸಿದರು.

ಮೈಸೂರು ಚನ್ನರಾಯಪಟ್ಟಣ ರಸ್ತೆ ತಡೆ:
ಕೃಷ್ಣರಾಜಪೇಟೆ ಪಟ್ಟಣದ ಎಂ.ಕೆ.ಬೊಮ್ಮೇಗೌಡ ವೃತ್ತದಲ್ಲಿ ಮಾನವ ಸರಪಳಿ ರಚಿಸಿ ರಸ್ತೆ ತಡೆ ನಡೆಸಿದ ನೂರಾರು ಕಾರ್ಯಕರ್ತರು ವಿದ್ರೋಹಿ ಸಂಘಟನೆಗಳನ್ನು ರಾಜ್ಯ ಸರ್ಕಾರವು ನಿಷೇಧಿಸಬೇಕು. ಬಂಧಿತರಾಗಿ ಬಿಡುಗಡೆಗೊಂಡಿರುವ 16 ಮುಸ್ಲಿಂ ಯುವಕರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಬೇಕು ಎಂದು ಘೋಷಣೆಗಳನ್ನು ಕೂಗಿದರು.

ವಕೀಲರಿಂದ ನ್ಯಾಯಾಲಯಗಳ ಕಲಾಪ ಬಹಿಷ್ಕಾರ:
ಕೃಷ್ಣರಾಜಪೇಟೆ ವಕೀಲರು ಇಂದು ನ್ಯಾಯಾಲಯದ ಕಲಾಪಗಳನ್ನು ಬಹಿಷ್ಕರಿಸಿ ಬಂದ್ ಗೆ ಬೆಂಬಲ ವ್ಯಕ್ತಪಡಿಸಿದರು.
ಪಟ್ಟಣದಲ್ಲಿ ಬೈಕ್ ಮೆರವಣಿಗೆ ನಡೆಸಿದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಬಂದ್ ಯಶಸ್ಸಿಗೆ ಸಂಪೂರ್ಣ ಸಹಕಾರ ನೀಡಿದರು.

ಬಿಗಿ ಬಂದೋಬಸ್ತ್: ನಾಗಮಂಗಲ ಡಿವೈಎಸ್ ಪಿ ವಿಶ್ವನಾಥ್ ಅವರ ನೇತೃತ್ವದಲ್ಲಿ ಸರ್ಕಲ್ ಇನ್ಸ್ ಪೆಕ್ಟರ್ ಕೆ.ಎನ್.ಸುಧಾಕರ್ ಬಿಗಿಪೋಲಿಸ್ ಬಂದೋಬಸ್ತ್ ಏರ್ಪಡಿಸಿದ್ದರು.
ಪಟ್ಟಣದ ಜಾಮಿಯಾ ಮಸೀದಿ, ಮುಸ್ಲಿಂ ಬ್ಲಾಕ್ ಮತ್ತು ಮಸಜೀದ್ ಏಖೈರ್ ಬಳಿ ಕೆ.ಎಸ್.ಆರ್.ಪಿ ತುಕಡಿಗಳನ್ನು ಭದ್ರತೆಗೆ ಆಯೋಜಿಸಲಾಗಿತ್ತು. ಕೆಲವು ಬಡಾವಣೆಗಳಲ್ಲಿ ಬಲವಂತವಾಗಿ ಅಂಗಡಿಮುಂಗಟ್ಟುಗಳ ಬಾಗಿಲು ಹಾಕಿಸುತ್ತಿದ್ದ ಹಿಂದೂಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಲಾಟಿಚಾರ್ಜ್ ಮಾಡಿದರು.‌ಸ್ವಲ್ಪ ಕಾಲ
ಪೊಲೀಸರು ಮತ್ತು ಹೋರಾಟಗಾರರ ನಡುವೆ ಮಾತಿನ ಚಕಮಕಿ ನಡೆಯಿತು.
ಒಟ್ಟಾರೆ ಕೆ.ಆರ್.ಪೇಟೆ ಬಂದ್ ಯಾವುದೇ ಗಲಾಟೆ ಗದ್ದಲಗಳಿಗೆ ಅವಕಾಶ ನೀಡದಂತೆ ಪೋಲಿಸರ ಸರ್ಪಗಾವಲಿನಲ್ಲಿ ಶಾಂತಿಯುತವಾಗಿ ನಡೆಯಿತು.

Share

About Bora nayak BIG TV NEWS, Mandya

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!