Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಸಿಬಿಐ ನಿರ್ದೇಶಕರಾಗಿ ಸುಭೋದ್‌ ಕುಮಾರ್‌ ನೇಮಕ

ಸಿಬಿಐ ನಿರ್ದೇಶಕರಾಗಿ ಸುಭೋದ್‌ ಕುಮಾರ್‌ ನೇಮಕ

ನವದೆಹಲಿ: ಮಹಾರಾಷ್ಟ್ರ ಕೇಡರ್‌ನ 1985 ರ ಬ್ಯಾಚ್‌ನ ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ನಿರ್ದೇಶಕರಾಗಿ ಎರಡು ವರ್ಷಗಳ ಕಾಲದ ಅವಧಿಗೆ ನೇಮಕ ಮಾಡಲಾಗಿದೆ.

ಸಿಬಿಐ ಮುಖ್ಯಸ್ಥರಾಗಿ ನೇಮಕಗೊಳ್ಳುವ ಮೊದಲು ಜೈಸ್ವಾಲ್ ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುತ್ತಿದ್ದರು. ಮೇ 24 ರಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಮೂವರು ಸದಸ್ಯರ ಆಯ್ಕೆ ಸಮಿತಿಯು ಜೈಸ್ವಾಲ್ ಅವರ ಹೆಸರನ್ನು ಫೈನಲ್ ಮಾಡಿದ ನಂತರ ಅವರನ್ನು ನೇಮಕ ಮಾಡಲಾಗಿದೆ.

ಪ್ರಧಾನಿ, ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ.ರಮಣ ಮತ್ತು ಲೋಕಸಭೆಯ ಪ್ರತಿಪಕ್ಷ ನಾಯಕ ಅಧೀರ್ ರಂಜನ್ ಚೌಧರಿ ಅವರು ಸಮಿತಿಯ ಇತರ ಇಬ್ಬರು ಸದಸ್ಯರಾಗಿದ್ದರು. ವಿಶೇಷವೆಂದರೆ, ಜೈಸ್ವಾಲ್ ಅವರ ನೇಮಕಕ್ಕೆ ಚೌಧರಿ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಕ್ಯಾಬಿನೆಟ್ ನೇಮಕಾತಿ (ಎಸಿಸಿ) ಸಮಿತಿಯು ಶಿಫಾರಸ್ಸಿನ ಆಧಾರದಲ್ಲಿ ಸುಬೋಧ್ ಕುಮಾರ್ ಜೈಸ್ವಾಲ್ ಅವರನ್ನು ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ನಿರ್ದೇಶಕರಾಗಿ ಎರಡು ಅವಧಿಗೆ ನೇಮಕ ಮಾಡಲು ಅನುಮೋದನೆ ನೀಡಿದೆ.

ಜೈಸ್ವಾಲ್ ಈ ಹಿಂದೆ ಮಹಾರಾಷ್ಟ್ರ ಪೊಲೀಸ್ ಮಹಾನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು, ಮಹಾರಾಷ್ಟ್ರ ಭಯೋತ್ಪಾದನಾ ನಿಗ್ರಹ ದಳ, ಮಹಾರಾಷ್ಟ್ರ ಪೊಲೀಸ್ ವಿಶೇಷ ತನಿಖಾ ತಂಡ (ಎಸ್‌ಐಟಿ), ರಾಜ್ಯ ಮೀಸಲು ಪೊಲೀಸ್ ಪಡೆ ಮತ್ತು ರಾಜ್ಯ ಗುಪ್ತಚರ ಬ್ಯೂರೋ ದಲ್ಲೂ ಕೆಲಸ ನಿರ್ವಹಿಸಿದ್ದರು.

26/11 ಮುಂಬೈ ಭಯೋತ್ಪಾದಕ ದಾಳಿ ಮತ್ತು 2006 ರಲ್ಲಿ ಮಹಾರಾಷ್ಟ್ರ ರಾಜಧಾನಿಯಲ್ಲಿ ನಡೆದ ಸರಣಿ ಸ್ಫೋಟಗಳಿಗೆ ಸಂಬಂಧಿಸಿದಂತೆ ಜೈಸ್ವಾಲ್ ತನಿಖೆಯ ಭಾಗವಾಗಿದ್ದರು.

ಎಲ್ಗರ್ ಪರಿಷತ್ ಮತ್ತು ಭೀಮಾ ಕೋರೆಗಾಂವ್ ಹಿಂಸಾಚಾರ ಪ್ರಕರಣಗಳ ತನಿಖೆಯಲ್ಲೂ ಪತ್ರವನ್ನು ವಾಹಿಸಿದ್ದರು ಅವರು ಪುಣೆಯಲ್ಲಿ ಹೆಚ್ಚುವರಿ ಪೊಲೀಸ್ ಆಯುಕ್ತರಾಗಿಯೂ ಸೇವೆ ಸಲ್ಲಿಸಿದರು. ಸಂಶೋಧನೆ ಮತ್ತು ವಿಶ್ಲೇಷಣೆ ವಿಭಾಗ, ವಿಶೇಷ ಸಂರಕ್ಷಣಾ ತಂಡ (ಎಸ್‌ಪಿಜಿ) ಮತ್ತು ಗುಪ್ತಚರ ಬ್ಯೂರೋದ ಭಾಗವಾಗಿ ಈ ಮೊದಲು ಕೆಲಸ ಮಾಡಿದ್ದರು. ತೆಲ್ಗಿ ಸ್ಟಾಂಪ್ ಪೇಪರ್ ಹಗರಣವನ್ನು ತನಿಖೆ ಮಾಡುವುದರಿಂದ ಹಿಡಿದು 26/11 ದಾಳಿಯವರೆಗೆ ಅವರು ಹಲವು ಪ್ರಮುಖ ಪ್ರಕರಣದ ತನಿಖಾ ತಂಡದಲ್ಲಿದ್ದರು.

Share

About Admin BIG TV NEWS

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!