Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಶಾಸಕ ತನ್ವೀರ್ ಸೇಠ್ ಹಲ್ಲೆ ಪ್ರಕರಣ: ಆರೋಗ್ಯ ಸ್ಥಿತಿ ಗಂಭೀರ.

ಶಾಸಕ ತನ್ವೀರ್ ಸೇಠ್ ಹಲ್ಲೆ ಪ್ರಕರಣ: ಆರೋಗ್ಯ ಸ್ಥಿತಿ ಗಂಭೀರ.

ಮೈಸೂರು: ತೀವ್ರ ಹಲ್ಲೆಗೊಳಗಾದ ಶಾಸಕ ತನ್ವೀರ್ ಸೇಠ್ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ತನ್ವೀರ್ ಸೇಠ್ ಅವರಿಗೆ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕತ್ತಿನ ಭಾಗದಲ್ಲಿ ಇರಿತವಾದ ಕಾರಣ ಕತ್ತು ಮತ್ತು ಹೃದಯವನ್ನು ಸಂಪರ್ಕಿಸುವ ಎರಡು ನರಗಳು ತುಂಡಾಗಿವೆ ಎಂದು ವರದಿಯಾಗಿದೆ. ಸತತ ಐದು ಗಂಟೆಗಳ ಶಸ್ತ್ರಚಿಕಿತ್ಸೆಯ ನಂತರ ನರಗಳನ್ನು ಮರುಜೋಡಣೆ ಮಾಡುವಲ್ಲಿ ವೈದ್ಯರು ಯಶಸ್ವಿಯಾಗಿದ್ದಾರೆ.
ಸಂಬಂಧಿಗಳ ಭೀಗರ ಔತಣಕೂಟದಲ್ಲಿ ಭಾಗಿಯಾಗಿ ನಂತರ ಸಂಗೀತ ಕಾರ್ಯಕ್ರಮ ವೀಕ್ಷಿಸುತ್ತಿದ್ದ ವೇಳೆ ತನ್ವೀರ್ ಸೇಠ್ ಮೇಲೆ ದಾಳಿ ನಡೆದಿದೆ. ಮೈಸೂರಿನ ನಗರದ ಬನ್ನಿ ಮಂಟಪದ ಆವರಣದಲ್ಲಿ ನಡೆಯುತಿದ್ದ ಕಾರ್ಯಕ್ರಮ ಇದಾಗಿತ್ತು.

Share

About ramu BIG TV NEWS, Kolar

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!