Hiring Reporter’s For more Information Contact Above Number 876 225 4007 . Program producer
Home / Breaking News / ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್ ಪಡೆದ ಮೊದಲ ಆಟಗಾರ ಯಾರು ಗೊತ್ತಾ…

ಟೆಸ್ಟ್ ಕ್ರಿಕೆಟ್‌ನಲ್ಲಿ 600 ವಿಕೆಟ್ ಪಡೆದ ಮೊದಲ ಆಟಗಾರ ಯಾರು ಗೊತ್ತಾ…

Spread the love

ಸೌತಾಂಪ್ಟನ್: ಇಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಪಾಕಿಸ್ತಾನ ತಂಡದ ನಾಯಕ ಅಜರ್ ಅಲಿ ವಿಕೆಟ್‌ ಉರುಳಿಸಿದ ಇಂಗ್ಲೆಂಡ್ ವೇಗಿ ಜೇಮ್ಸ್‌ ಆಯಂಡರ್ಸನ್‌ ಅವರು ಟೆಸ್ಟ್‌ ಕ್ರಿಕೆಟ್‌ನಲ್ಲಿ 600 ವಿಕೆಟ್‌ ಕಬಳಿಸಿದ ಸಾಧನೆ ಮಾಡಿದರು. ಇದರೊಂದಿಗೆ ಈ ಸಾಧನೆ ಮಾಡಿದ ವಿಶ್ವದ ಮೊದಲ ವೇಗದ ಬೌಲರ್‌ ಎನಿಸಿಕೊಂಡರು.

ಇಂಗ್ಲೆಂಡ್‌-ಪಾಕಿಸ್ತಾನ ಮೂರು ಪಂದ್ಯಗಳ ಟೆಸ್ಟ್‌ ಸರಣಿಯ ಅಂತಿಮ ಪಂದ್ಯದ ಕೊನೆಯ ದಿನ ಆಯಂಡರ್ಸನ್‌ ಈ ದಾಖಲೆ ಬರೆದರು.

38 ವರ್ಷ ವಯಸ್ಸಿನ ವೇಗಿ ಇದುವರೆಗೆ ಒಟ್ಟು 156 ಟೆಸ್ಟ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಒಟ್ಟು 291 ಇನಿಂಗ್ಸ್‌ಗಳಲ್ಲಿ ಬೌಲಿಂಗ್‌ ಮಾಡಿರುವ ಅವರು 26.77ರ ಸರಾಸರಿಯಲ್ಲಿ ಇಷ್ಟು ವಿಕೆಟ್ ಪಡೆದಿದ್ದಾರೆ.

ಒಟ್ಟಾರ ಅತಿಹೆಚ್ಚು ವಿಕೆಟ್ ಪಡೆದ ಬೌಲರ್‌ಗಳ ಪಟ್ಟಿಯಲ್ಲಿ ಜೇಮ್ಸ್ ನಾಲ್ಕನೇ ಸ್ಥಾನದಲ್ಲಿದ್ದಾರೆ. ಸ್ಪಿನ್ನರ್‌ಗಳಾದ ಶ್ರೀಲಂಕಾದ ಮುತ್ತಯ್ಯ ಮುರುಳಿಧರನ್‌ (800), ಆಸ್ಟ್ರೇಲಿಯಾದ ಶೇನ್‌ ವಾರ್ನ್‌ (708) ಮತ್ತು ಭಾರತದ ಅನಿಲ್‌ ಕುಂಬ್ಳೆ (619) ಮೊದಲ ಮೂರು ಸ್ಥಾನಗಳಲ್ಲಿದ್ದಾರೆ.

ಸದ್ಯ ಇಂಗ್ಲೆಂಡ್‌ ಪರ ಅತಿಹೆಚ್ಚು ವಿಕೆಟ್‌ ಪಡೆದ ಬೌಲರ್‌ ಎನಿಸಿಕೊಂಡಿರುವುದಷ್ಟೇ ಅಲ್ಲದೆ, ಆಯಂಡರ್ಸನ್‌ ಮತ್ತೊಂದು ದಾಖಲೆ ಬರೆಯುವ ಸನಿಹದಲ್ಲಿದ್ದಾರೆ. ಇನ್ನು ಕೇವಲ 5 ಟೆಸ್ಟ್‌ ಪಂದ್ಯಗಳಲ್ಲಿ ಕಣಕ್ಕಿಳಿದರೆ ತಮ್ಮ ತಂಡದ‌ ಪರ ಅತಿಹೆಚ್ಚು ಪಂದ್ಯವಾಡಿದ ಬೌಲರ್‌ ಎನಿಸಿಕೊಳ್ಳಲಿದ್ದಾರೆ. 161 ಪಂದ್ಯಗಳನ್ನು ಆಡಿರುವ ಆಲಿಸ್ಟರ್‌ ಕುಕ್‌ ಸದ್ಯ ಮೊದಲ ಸ್ಥಾನದಲ್ಲಿದ್ದಾರೆ.

ಇಂಗ್ಲೆಂಡ್ ತಂಡದಲ್ಲಿರುವ ಮತ್ತೊಬ್ಬ ವೇಗಿ ಸ್ಟುವರ್ಟ್‌ ಬ್ರಾಡ್‌ ಇತ್ತೀಚೆಗೆ ಟೆಸ್ಟ್‌ ಕ್ರಿಕೆಟ್‌ನಲ್ಲಿ 500 ವಿಕೆಟ್‌ ಕಬಳಿಸಿದ ಸಾಧನೆ ಮಾಡಿದ್ದರು. 143 ಪಂದ್ಯಗಳಿಂದ ಬ್ರಾಡ್‌ 514 ವಿಕೆಟ್ ಉರುಳಿಸಿದ್ದಾರೆ.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!