Breaking News
Hiring Reporter’s For more Information Contact Above Number 876 225 4007 . Program producer
Home / Breaking News / ರಾತ್ರೋರಾತ್ರಿ 41 ವರ್ಷದ ಇತಿಹಾಸ ಮರುಕಳಿಸಿದ ಮಹಾರಾಷ್ಟ್ರ ಸರ್ಕಾರ.

ರಾತ್ರೋರಾತ್ರಿ 41 ವರ್ಷದ ಇತಿಹಾಸ ಮರುಕಳಿಸಿದ ಮಹಾರಾಷ್ಟ್ರ ಸರ್ಕಾರ.

ಮುಂಬೈ: ಮಹಾರಾಷ್ಟ್ರದಲ್ಲಿ ರಾತ್ರೋರಾತ್ರಿ ನಡೆದ ಕ್ಷಿಪ್ರ ರಾಜಕೀಯ ಬೆಳವಣಿಗೆಯಲ್ಲಿ ಎನ್ ಸಿಪಿ ಮುಖಂಡ ಅಜಿತ್ ಪವಾರ್ ಅವರು ಉಪ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವ ಮೂಲಕ 41 ವರ್ಷಗಳ ಇತಿಹಾಕ ಮರುಕಳುಹಿಸಿದ್ದಾರೆ.
1978ರಲ್ಲಿ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರು ಅಧಿಕಾರಕ್ಕಾಗಿ ಪಕ್ಷ ತೊರೆದಿದ್ದು, ಇಂದು ಅವರ ಸೋದರನ ಮಗ ಅಜಿತ್ ಪವಾರ್ ಅಧಿಕಾರಕ್ಕಾಗಿ ಪಕ್ಷ ತೊರೆದಿದ್ದಾರೆ. ಅಜಿತ್‌ ಪವಾರ್‌ ಅವರು ಈಗ ತೆಗೆದುಕೊಂಡ ನಿರ್ಧಾರಕ್ಕೂ ಹಿಂದೆ ಶರದ್‌ ಪವಾರ್‌ ಅವರು ತೆಗೆದುಕೊಂಡಿದ್ದ 41 ವರ್ಷಗಳ ಹಿಂದಿನ ನಡೆಗೂ ಹಲವು ಸಾಮ್ಯತೆಗಳಿವೆ.
1978ರಲ್ಲಿ ಶರದ್‌ ಪವಾರ್‌ ಕೇವಲ 37 ವರ್ಷಕ್ಕೇ ಮುಖ್ಯಮಂತ್ರಿಯಾಗಿದ್ದರು. ಅದೂ ಕಾಂಗ್ರೆಸ್ ಪಕ್ಷವನ್ನು ಒಡೆದು. ಕಾಂಗ್ರೆಸ್‌ (ಯು) ನಲ್ಲಿದ್ದ ಶರದ್‌ ಪವಾರ್, ಕೈ ಪಕ್ಷ ತೊರೆದು ಜನತಾ ಪಕ್ಷದ ಜತೆಗೆ ಮೈತ್ರಿ ಮಾಡಿಕೊಂಡು ಮಹಾರಾಷ್ಟ್ರದ ಸಿಎಂ ಆದರು.

Share

About Admin BIG TV NEWS

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!