Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಪಿ.ಎಫ್.ಐ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿ ಮಾಡಿದ ಬಂದ್ ಯಶಸ್ವಿ.

ಪಿ.ಎಫ್.ಐ ಸಂಘಟನೆ ನಿಷೇಧಿಸುವಂತೆ ಆಗ್ರಹಿಸಿ ಮಾಡಿದ ಬಂದ್ ಯಶಸ್ವಿ.

ಮಂಡ್ಯ: ಮುಸ್ಲಿಂ ಉಗ್ರರ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮ ಜರುಗಿಸಬೇಕು ಹಾಗೂ ಪಿ.ಎಫ್.ಐ ಸಂಘಟನೆ ನಿಷೇಧಿಸುವಂತೆ ಒತ್ತಾಯಿಸಿ ಕರೆ ನೀಡಿದ್ದ ಕೆ.ಆರ್.ಪೇಟೆ ಬಂದ್ ಸಂಪೂರ್ಣ ಯಶಸ್ವಿಯಾಗಿದೆ.
ಹಿಂದೂಪರ ಸಂಘಟನೆಗಳು ಹಾಗೂ ಕನ್ನಡಪರ ಸಂಘಟನೆಗಳು ಕರೆ ನೀಡಿದ್ದ ಕೆ.ಆರ್.ಪೇಟೆ ಬಂದ್ ಸಂಪೂರ್ಣ ಯಶಸ್ವಿಯಾಗಿದೆ.
ಕೃಷ್ಣರಾಜಪೇಟೆ ಆಲಂಬಾಡಿಕಾವಲು ಗ್ರಾಮದ ಗುಪ್ತಸ್ಥಳದಲ್ಲಿ ಪಿ.ಎಫ್.ಐ ಸಂಘಟನೆಯ ಕಾರ್ಯಕರ್ತರು ಪೆರೇಡ್ ನಡೆಸಿ
ದೇಶದ್ರೋಹಿ ಕೃತ್ಯದಲ್ಲಿ ತೊಡಗಿದ್ದಾಗ ಸ್ಥಳೀಯರು ನೀಡಿದ ಮಾಹಿತಿ ಆಧರಿಸಿ ಕೆ.ಆರ್.ಪೇಟೆ ಗ್ರಾಮಾಂತರ ಪೋಲಿಸರು 16ಜನ ಯುವಕರನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ನ್ಯಾಯಾಲಯವು ಬಂಧಿತ ಮುಸ್ಲಿಂ ಯುವಕರಿಗೆ ಒಂದೇ ದಿನದಲ್ಲಿ ಜಾಮೀನು ನೀಡಿ ಬಿಡುಗಡೆ ಮಾಡಿದ್ದು ದೇಶಭಕ್ತರು ಹಾಗೂ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿತ್ತು. ಬಂಧಿತ ಯುವಕರ ಮೇಲೆ ಕಾನೂನು ಕ್ರಮಕೈಗೊಳ್ಳಬೇಕು. ದೇಶದ ಭದ್ರತೆ, ಏಕತೆ ಹಾಗೂ ಸೌಹಾರ್ಧತೆಗೆ ಭಂಗ ತರುವ ವಿಚ್ಛಿದ್ರಕಾರಿ ಶಕ್ತಿಗಳ ವಿರುದ್ಧ ನಿರ್ಧಾಕ್ಷಿಣ್ಯ ಕ್ರಮಕೈಗೊಳ್ಳಬೇಕು. ಪಿ.ಎಫ್.ಐ ಸಂಘಟನೆಯನ್ನು ನಿಷೇಧಿಸಬೇಕು ಎಂದು ಆಗ್ರಹಿಸಿ
ಹಿಂದೂಪರ ಸಂಘಟನೆಗಳು ಮತ್ತು ಕನ್ನಡಪರ ಸಂಘಟನೆಗಳು ನೀಡಿದ್ದ ಕೆ.ಆರ್.ಪೇಟೆ ಬಂದ್ ಸಂಪೂರ್ಣ ಯಶಸ್ವಿಯಾಗಿದೆ.

Share

About Bora nayak BIG TV NEWS, Mandya

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!