Hiring Reporter’s For more Information Contact Above Number 876 225 4007 . Program producer
Home / Breaking News / ರಾಜ್ಯದಲ್ಲಿ ಶಾಲೆ ಆರಂಭದ ಚರ್ಚೆ ಹೊತ್ತಲ್ಲೇ ಬಿಗ್ ಶಾಕ್

ರಾಜ್ಯದಲ್ಲಿ ಶಾಲೆ ಆರಂಭದ ಚರ್ಚೆ ಹೊತ್ತಲ್ಲೇ ಬಿಗ್ ಶಾಕ್

Spread the love

ಬೆಂಗಳೂರು : ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭದ ಕುರಿತಂತೆ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಬಿಗ್ ಶಾಕ್ ಎದುರಾಗಿದ್ದು, ವಿದ್ಯಾಗಮ ಯೋಜನೆಯಡಿ ವಠಾರ ಶಾಲೆಯಲ್ಲಿ ಪಾಠ ಮಾಡುತ್ತಿದ್ದ ಶಿಕ್ಷಕರೊಬ್ಬರಿಗೆ ಕೊರೊನಾ ವೈರಸ್ ಸೋಂಕು ತಗುಲಿದ ಬಳಿಕ ನಾಲ್ಕು ಮಕ್ಕಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

ಕೊರೊನಾ ವೈರಸ್ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಶಾಲಾ-ಕಾಲೇಜು ಆರಂಭ ಮಾಡಬೇಕೇ, ಬೇಡವೇ? ಎಂಬ ಬಗ್ಗೆ ಪರ ವಿರೋಧಗಳು ವ್ಯಕ್ತವಾಗುತ್ತಿರುವ ಹೊತ್ತಲ್ಲೇ ವಠಾರ ಶಾಲೆಯ ನಾಲ್ವರು ವಿದ್ಯಾರ್ಥಿಗಳಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

20 ದಿನಗಳ ಹಿಂದೆ ಮಾಶಾಳ ಸರ್ಕಾರಿ ಮಾದರಿ ಪ್ರಾಥಮಿಕ ಶಾಳೆಯ ಮುಖ್ಯ ಶಿಕ್ಷಕರಿಗೆ ಕೊರೊನಾ ವೈರಸ್ ಸೋಂಕು ದೃಢಪಟ್ಟಿತ್ತು. ಈ ಹಿನ್ನೆಲೆಯಲ್ಲಿ ಶಾಲೆಯ 20 ಶಿಕ್ಷಕರ ಕೋವಿಡ್ ಟೆಸ್ಟ್ ನಡೆಸಲಾಗಿದ್ದು, ಎಲ್ಲರ ವರದಿಯೂ ನೆಗೆಟಿವ್ ಬಂದಿದೆ.

ಜೊತೆಗೆ ಶಾಲೆಯ 207 ವಿದ್ಯಾರ್ಥಿಗಳಿಗೆ ಕೋವಿಡ್ ಪರೀಕ್ಷೆ ನಡೆಸಲಾಗಿದ್ದು, ನಾಲ್ಕು ವಿದ್ಯಾರ್ಥಿಗಳಲ್ಲಿ ಕೊರೊನಾ ವೈರಸ್ ಸೋಂಕು ದೃಢಪಟ್ಟಿದೆ.

Check Also

ಭಾರತೀಯ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್​ಗೆ ಹೃದಯಾಘಾತ!

Spread the love ನವ ದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!