Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಸರ್ಕಾರಿ ನೌಕರರ ಕನಿಷ್ಠ ವೇತನ ಹೆಚ್ಚಿಸಲಿದೆಯೇ ಕೇಂದ್ರ ಸರ್ಕಾರ.

ಸರ್ಕಾರಿ ನೌಕರರ ಕನಿಷ್ಠ ವೇತನ ಹೆಚ್ಚಿಸಲಿದೆಯೇ ಕೇಂದ್ರ ಸರ್ಕಾರ.

ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕನಿಷ್ಠ ವೇತನವನ್ನು 8,000 ರೂ. ಗಳಷ್ಟು ಹೆಚ್ಚಿಸುವ ವಿಷಯದ ಬಗ್ಗೆ ಸಕಾರಾತ್ಮಕವಾಗಿ ತೀರ್ಮಾನಿಸುವ ಸಾಧ್ಯತೆ ಇದೆ ಎನ್ನಲಾಗಿದೆ.
ವರದಿಗಳ ಪ್ರಕಾರ, ಕೇಂದ್ರ ಸಚಿವ ಸಂಪುಟದ ಪ್ರಮುಖ ಸಭೆ ಈ ತಿಂಗಳ ಕೊನೆಯಲ್ಲಿ ನಡೆಲಿದ್ದು,ಕನಿಷ್ಠ ವೇತನ ಹೆಚ್ಚಳ ಸೇರಿದಂತೆ ಕೆಲವು ಪ್ರಮುಖ ನಿರ್ಧಾರಗಳನ್ನು ತೆಗೆದುಕೊಳ್ಳುವ ನಿರೀಕ್ಷೆಯಿದೆ. ಈ ಸಭೆಯಲ್ಲಿಯೇ ಕೇಂದ್ರ ನೌಕರರ ಕನಿಷ್ಠ ವೇತನವನ್ನು ಹೆಚ್ಚಿಸುವ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ವರದಿಯಾಗಿದೆ. ಪ್ರಸ್ತಾಪಕ್ಕೆ ಕ್ಯಾಬಿನೆಟ್ ಅನುಮೋದನೆ ದೊರೆತ ನಂತರ, ಹಣಕಾಸು ಸಚಿವಾಲಯವು ಅಧಿಕೃತ ಘೋಷಣೆ ಮಾಡುತ್ತದೆ. 7 ನೇ ವೇತನ ಆಯೋಗವು ಶಿಫಾರಸು ಮಾಡಿದಂತೆ ಕನಿಷ್ಠ ವೇತನವನ್ನು 8,000 ರೂ.ಗಳಷ್ಟು ಹೆಚ್ಚಿಸುವ ಸಾಧ್ಯತೆಯಿದೆ.
ಆರ್ಥಿಕ ಕುಸಿತದಿಂದ ಚೇತರಿಸಿಕೊಳ್ಳಲು ಕೆಲವು ಪ್ರಮುಖ ನಿರ್ಧಾರಗಳನ್ನು ಸಹ ತೆಗೆದುಕೊಳ್ಳಬಹುದು ಎನ್ನಲಾಗಿದೆ.
ಕನಿಷ್ಠ ವೇತನವನ್ನು ಹೆಚ್ಚಿಸುವ ನಿರ್ಧಾರವನ್ನು ವರದಿಗಳ ಪ್ರಕಾರ ದೀಪಾವಳಿಯ ಮೊದಲು ತೆಗೆದುಕೊಂಡು ಘೋಷಿಸಲು ನಿರ್ಧರಿಸಲಾಗಿತ್ತು ಆದರೆ ರ್ಥಿಕ ಕುಸಿತದ ಹಿನ್ನೆಲೆಯಲ್ಲಿ ನಿರ್ಧಾರ ವಿಳಂಬವಾಗಿದೆ ಎಂದು ಹೇಳಲಾಗುತ್ತಿದೆ. 2014 ರ ಫೆಬ್ರವರಿಯಲ್ಲಿ 7 ನೇ ಕೇಂದ್ರ ವೇತನ ಆಯೋಗ ರಚಿಸಲಾಯಿತು. ಇದು ತನ್ನ ಶಿಫಾರಸುಗಳನ್ನು 19 ನವೆಂಬರ್ 2015 ರಂದು ಸರ್ಕಾರಕ್ಕೆ ಸಲ್ಲಿಸಿದೆ.

Share

About Vijayalakshmi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!