Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕರ್ನಾಟಕ / ಹಾಸ್ಟೆಲ್ ವಾರ್ಡನ್ ನಿಂದ ಥಳಿತಕ್ಕೆ ಒಳಗಾದ ವಿದ್ಯಾರ್ಥಿ ಸಾವು

ಹಾಸ್ಟೆಲ್ ವಾರ್ಡನ್ ನಿಂದ ಥಳಿತಕ್ಕೆ ಒಳಗಾದ ವಿದ್ಯಾರ್ಥಿ ಸಾವು

ಹುಬ್ಬಳ್ಳಿ,ಅ.28-ಹಾಸ್ಟೇಲ್ ವಾರ್ಡನ್ ನಿಂದ ಥಳಿತಕ್ಕೊಳಗಾಗಿದ್ದ ವಿದ್ಯಾರ್ಥಿ ವಿಜಯ ಇಂದು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.
ನೇಕಾರನಗರ ನಿವಾಸಿ ವಿಜಯ ಮೃತ್ಯುಂಜಯ ಹಿರೇಮಠ ಮೃತಪಟ್ಟ ಬಾಲಕನಾಗಿದ್ದು, ಇತ ಹಾವೇರಿ ಜಿಲ್ಲೆಯ ಹಾನಗಲ್ ತಾಲೂಕಿನ ಛಾತ್ರಾ ಖಾಸಗಿ ಹಾಸ್ಟೆಲ್‍ ನಲ್ಲಿ ಇದ್ದುಕೊಂಡು ವಿದ್ಯಾಭ್ಯಾಸ ಮಾಡುತ್ತಿದ್ದನು. ಆದರೆ ಕಳೆದ ತಿಂಗಳು ಇತ ಹಾಸಿಗೆಯಲ್ಲಿ ಮೂತ್ರ ವಿಸರ್ಜನೆ ಮಾಡಿಕೊಂಡ ಎಂಬ ಕಾರಣಕ್ಕೆ ಹಾಸ್ಟೆಲ್ ವಾರ್ಡನ್ ಶ್ರವಣಕುಮಾರ ವಿಜಯ ಮೇಲೆ ಮನಬಂದಂತೆ ಥಳ್ಳಿಸಿದ್ದಾನೆ. ಪರಿಣಾಮ ವಿಜಯನ ಹೊಟ್ಟೆ ಸೇರಿದಂತೆ ಮತ್ತಿತರ ಕಡೆ ಗಂಭೀರವಾಗಿ ಗಾಯಗೊಂಡಿದ್ದನು.
ಗಾಯಗೊಂಡ ವಿಜಯನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ದಾಖಲಿಸಿ ಮೊದಲು ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಆದರೆ ವಿಜಯನಿಗೆ ಇನ್ನೂ ಹೆಚ್ಚಿನ ಚಿಕಿತ್ಸೆ ಬೇಕಾಗಿದ ಹಿನ್ನಲೆಯಲ್ಲಿ ಬೆಂಗಳೂರಿನ ವಾಣಿ ವಿಲಾಸ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಇಂದು ಬಾಲಕನ ಸ್ಥಿತಿ ಗಂಭೀರವಾಗಿದ್ದರಿಂದ ರವಿವಾರ ಮಧ್ಯಾಹ್ನ ಮೃತಪಟ್ಟಿದ್ದಾನೆ.
ಇನ್ನೂ ಬಾಲಕನ ಈ ಸ್ಥಿತಿಗೆ ಕಾರಣನಾದ ವಾರ್ಡನ್ ಶ್ರವಣಕುಮಾರ ವಿರುದ್ಧ ಈವರೆಗೂ ಪೊಲೀಸರು ಯಾವುದೇ ಕ್ರಮಕೈಗೊಂಡಿಲ್ಲ. ಅಲ್ಲದೇ, ಹಾಸ್ಟೆಲ್‍ನ ಆಡಳಿತ ಮಂಡಳಿಯವರು ಈವರೆಗೂ ವಿದ್ಯಾರ್ಥಿಯ ಕುಟುಂಬಸ್ಥರನ್ನು ಭೇಟಿಯಾಗುವ ಸೌರ್ಜನ್ಯವನ್ನೂ ತೋರಿಲ್ಲ ಎಂದು ಕುಟುಂಬಸ್ಥರ ಆರೋಪಿಸಿದ್ದಾರೆ. ಈ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share

About solaragoppa

Check Also

ವಿನಯ ಕುಲಕರ್ಣಿ ಬಂಧನ-ರಾಜಕೀಯ ಪ್ರೇರಿತ: ಬಿ.ಕೆ.ಹರಿಪ್ರಸಾದ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಬಂಧನ ಮಾಡಿದ್ದು ರಾಜಕೀಯ ದುರುದ್ದೇಶದಿಂದ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದರು. …

Leave a Reply

Your email address will not be published. Required fields are marked *

error: Content is protected !!