Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಲಕ್ಷ್ಮಣ ಸವದಿ ಅವರನ್ನು ಡಿಸಿಎಂ ಸ್ಥಾನದಿಂದ ಕೈ ಬಿಡುವ ನಿರ್ಧಾರ ಆಧಾರರಹಿತ: ಜೋಶಿ ಸ್ಪಷ್ಟನೆ.

ಲಕ್ಷ್ಮಣ ಸವದಿ ಅವರನ್ನು ಡಿಸಿಎಂ ಸ್ಥಾನದಿಂದ ಕೈ ಬಿಡುವ ನಿರ್ಧಾರ ಆಧಾರರಹಿತ: ಜೋಶಿ ಸ್ಪಷ್ಟನೆ.

ಹುಬ್ಬಳ್ಳಿ: ಲಕ್ಷ್ಮಣ ಸವದಿ ಅವರನ್ನು ಡಿಸಿಎಂ ಸ್ಥಾನದಿಂದ ಕೈಬಿಡುತ್ತಾರೆ ಎಂಬ ಮಾತುಗಳು ಆಧಾರ ರಹಿತ ಎಂದು
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸ್ಪಷ್ಟಪಡಿಸಿದರು.
ನಗರದಲ್ಲಿಂದು ಲಕ್ಷಣ ಸವದಿಗೆ ಡಿಸಿಎಂ ಸ್ಥಾನದಿಂದ ಕೈಬಿಟ್ಟು ಉಮೇಶ ಕತ್ತಿಗೆ ಡಿಸಿಎಂ ಸ್ಥಾನ ಎಂಬ ಮಾತುಗಳು ಕೇಳಿ ಬರುತ್ತಿವೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಅವರು, ಆ ವಿಷಯ ಕೇವಲ ಊಹಾಪೋಹಗಳಷ್ಟೇ, ಆ ಬಗ್ಗೆ ಉತ್ತರ ಕೊಡುವ ಅವಶ್ಯಕತೆ ಇಲ್ಲ ಎಂದರು.
ಮಾಜಿ ಸಿಎಂ ಕುಮಾರಸ್ವಾಮಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ನೇತೃತ್ವದಲ್ಲಿ ಬಿಜೆಪಿ ಉತ್ತಮ ಆಡಳಿತ ನೀಡುತ್ತಿದ್ದು, ಅವರ ಆಡಳಿತದಿಂದ ಕುಮಾರಸ್ವಾಮಿ ಮೆಚ್ಚಿ ಈ ರೀತಿ ಹೇಳಿಕೆ ನೀಡಿರಬಹುದು. ಕುಮಾರಸ್ವಾಮಿ ಅವರು ಬೆಂಬಲ‌ ನೀಡಿದರು ನಾವು ಬೆಂಬಲ ಸ್ವೀಕರಿಸುವ ಅವಶ್ಯಕತೆ ಇಲ್ಲಾ ಎಂದು ತಿರುಗೇಟು ನೀಡಿದ್ದಾರೆ.
ಬಿಜೆಪಿಯವರು ಯಾರ ಬೆಂಬಲವನ್ನು ಕೇಳಿಲ್ಲಾ, ನಮಗೆ ಯಾವುದೇ ಬೆಂಬಲದ ಅಗತ್ಯವಿಲ್ಲ. ಹಾಗೇನಾದರೂ ಬೆಂಬಲ ಸೂಚಿಸುತ್ತೇವೆ ಎಂದರೆ ಆ ಬಗ್ಗೆ ಮುಂದೆ ನೋಡೋಣಾ ಎಂದು ಹೇಳಿದರು.
ಇನ್ನೂ ಸಿದ್ದರಾಮಯ್ಯ ಹಿರಿಯ ರಾಜಕಾರಣಿ ಆಗಿದ್ದು, ಅವರು ಸಭಾಕ್ಷರಿಗೆ ಏಕವಚನದಲ್ಲಿ ಮಾತನಾಡುವುದು ಅವರನ್ನು ಹೆದರಿಸುವ ರೀತಿಯಲ್ಲಿದೆ. ಇಂದು ಪ್ರಜಾಪ್ರಭುತ್ವಕ್ಕೆ ಗಂಡಾಂತರ ತಂದಂತಾಗುತ್ತದೆ. ಅವರು ಕ್ಷುಲಕ ಮಾತುಗಳನ್ನು ಹೇಳುವ ಮೂಲಕ ಸಭಾಕ್ಷರ ಘನತೆ ಹಾಗೂ ಗೌರವಕ್ಕೆ ದಕ್ಕೆ ತರುತ್ತಾರೆ. ಅವರು ಈ‌ ರೀತಿಯ ಕೀಳುಮಟ್ಟದ ರಾಜಕೀಯಕ್ಕೆ ಇಳಿಯಬಾರದು ಎಂದು ಹರಿಹಾಯ್ದಿದ್ದಾರೆ.

Share

About Shaikh BIG TV NEWS, Hubballi

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!