Hiring Reporter’s For more Information Contact Above Number 876 225 4007 . Program producer
Home / Breaking News / ಮೈಸೂರು ದಸರಾದಲ್ಲಿ ಭಾಗಿಯಾಗುವವರಿಗೆ `ಕೋವಿಡ್ ಟೆಸ್ಟ್’ ಕಡ್ಡಾಯ

ಮೈಸೂರು ದಸರಾದಲ್ಲಿ ಭಾಗಿಯಾಗುವವರಿಗೆ `ಕೋವಿಡ್ ಟೆಸ್ಟ್’ ಕಡ್ಡಾಯ

Spread the love

ಮೈಸೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಮೈಸೂರು ದಸರಾದಲ್ಲಿ ಭಾಗಿಯಾಗುವವರಿಗೆ ಕೋವಿಡ್ ಪರೀಕ್ಷೆ ಕಡ್ಡಾಯವಾಗಿ ಮಾಡಿಸಿಕೊಳ್ಳಬೇಕು ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸೋಮಶೇಖರ್, ದಸರಾವನ್ನು ಸರಳವಾಗಿ ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಜನ ಸೇರದಂತೆ ಆಚರಿಸಬೇಕೆಂಬ ಸೂಚನೆ ಇರುವ ಹಿನ್ನೆಲೆಯಲ್ಲಿ ದಸರಾದಲ್ಲಿ ಭಾಗಿಯಾಗುವ ಸಚಿವರು ಸೇರಿದಂತೆ ಎಲ್ಲರೂ ಕೊರೊನಾ ಪರೀಕ್ಷೆ ಮಾಡಿಸಬೇಕು ಎಂದು ಹೇಳಿದರು.

ಇನ್ನು ಇಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮೈಸೂರಿಗೆ ಆಗಮಿಸುತ್ತಿದ್ದು, ಕೋವಿಡ್ ಹಾಗೂ ದಸರಾ ಬಗ್ಗೆ ಅವರು ಚರ್ಚೆ ನಡೆಸಲಿದ್ದಾರೆ. ಕೋವಿಡ್ ಹಿನ್ನೆಲೆಯಲ್ಲಿ ಮೂರ್ನಾಲ್ಕು ಸಚಿವರು ಮಾತ್ರ ಸದ್ಯ ಉದ್ಘಾಟನೆಗೆ ಬರಲಿದ್ದಾರೆ ಎಂಬ ಮಾಹಿತಿ ಇದೆ ಎಂದರು.

Check Also

ವಾಣಿಜ್ಯ ನಗರದಲ್ಲಿ ಹೆಚ್ಚಾಗುತ್ತಿರುವುದು ಬೈಕ್ ಕಳ್ಳತನ… ಸಾರ್ವಜನಿಕರೇ ಎಚ್ಚರ ಎಚ್ಚರ

Spread the loveಹುಬ್ಬಳ್ಳಿ: ನಗರದಲ್ಲಿ ಮನೆಗಳ ಮುಂದೆ ಹಾಗೂ ಪಾರ್ಕಿಂಗ್ ಜಾಗದಲ್ಲಿ ಪಾರ್ಕ್ ಮಾಡಿದ ದ್ವಿಚಕ್ರಗಳ ವಾಹನಗಳನ್ನು ಕಳ್ಳತನ ಮಾಡುತ್ತಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!