Hiring Reporter’s For more Information Contact Above Number 876 225 4007 . Program producer
Home / Breaking News / ಇಂದು ನಿಗದಿಯಂತೆ ನಡೆಯಲಿದೆ KPSC ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆ

ಇಂದು ನಿಗದಿಯಂತೆ ನಡೆಯಲಿದೆ KPSC ಗೆಜೆಟೆಡ್ ಪ್ರೊಬೇಷನರಿ ಪೂರ್ವಭಾವಿ ಪರೀಕ್ಷೆ

Spread the love

ಬೆಂಗಳೂರು: ಕರ್ನಾಟಕ ಲೋಕಸೇವಾ ಆಯೋಗದಿಂದ ಗೆಜೆಟೆಡ್​ ಪ್ರೊಬೇಷನರಿ ಹುದ್ದೆಗಳಿಗೆ ಪೂರ್ವಭಾವಿ ಪರೀಕ್ಷೆ ಇಂದು ನಿಗದಿಯಂತೆ ನಡೆಯಲಿದೆ. ಒಟ್ಟು 106 ಗೆಜೆಟೆಡ್​ ಪ್ರೊಬೇಷನರಿ ಹುದ್ದೆಗೆ ಈ ಪರೀಕ್ಷೆ ನಡೆಯಲಿದ್ದು, 1,65,258 ಅಭ್ಯರ್ಥಿಗಳು ಪರೀಕ್ಷೆಗ ಬರೆಯುವುದಕ್ಕೆ ನೊಂದಾಯಿಸಿಕೊಂಡಿದ್ದು, ಕರೋನಾ ಸೊಂಕಿನ ಹಿನ್ನಲೆಯಲ್ಲಿ ಇಲಾಖೆಯ ಎಲ್ಲಾ ಮುಂಜಾಗ್ರತ ಕ್ರಮವನ್ನು ಹಾಗೂ ಎಲ್ಲಾ ರೀತಿಯ ಸಿದ್ದತೆಯನ್ನು ಬೆಂಗಳೂರು, ಬೆಳಗಾವಿ, ಬಳ್ಳಾರಿ, ದಾವಣಗೆರೆ, ಧಾರವಾಡ, ಕಲಬುರಗಿ, ಮಂಗಳೂರು, ಮೈಸೂರು, ರಾಯಚೂರು ಮತ್ತು ಶಿವಮೊಗ್ಗದಲ್ಲಿ ಪರೀಕ್ಷಾ ಕೇಂದ್ರದಲ್ಲಿ ನಡೆಸಲಿದೆ.

ಪರೀಕ್ಷಾ ಕೇಂದ್ರಗಳ ಸುತ್ತಲೂ 200ಮೀ ಆವರಣವನ್ನು ಸಿಆರ್‍ಪಿಸಿ ಕಲಂ 144ರ ಮೇರೆಗೆ ನಿರ್ಭಂದಿತ ಪ್ರದೇಶವೆಂದು ಘೋಷಿಸಲಾಗಿದೆ.

ಸದರಿ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತಲೂ ಬೆಳಗ್ಗೆ 09 ರಿಂದ ಸಂಜೆ 5ರ ವರೆಗೆ ಜೆರಾಕ್ಸ್ ಸೆಂಟರ್ ಹಾಗೂ ಅನಧಿಕೃತ ವ್ಯಕ್ತಿ ಮತ್ತು ವ್ಯಕ್ತಿಗಳ ಗುಂಪುಗಳಿಗೆ ಪ್ರವೇಶ ನಿಷೇಧಿಸಲಾಗಿದೆ ಕರೋನಾ ಸೋಂಕು ಹಿನ್ನಲೆಯಲ್ಲಿ ಈ ಬಾರಿ ಎಸ್.ಎಸ್.ಎಲ್.ಸಿ, ಪಿಯುಸಿಯ ಒಂದು ವಿಷಯದ ಪರೀಕ್ಷೆ ಹಾಗೂ ಸಿಇಟಿ ಪರೀಕ್ಷೆಗಳನ್ನು ಅತ್ಯಂತ ಯಶಸ್ವಿಯಾಗಿ ಯಾವುದೇ ವಿದ್ಯಾರ್ಥಿಗೆ ತೊಂದರೆಯಾಗದAತೆ ಸಂಪೂರ್ಣ ಮುನ್ನೆಚ್ಚರಿಕಾ ಕ್ರಮಗಳನ್ನು ವಹಿಸಿ ನಿರ್ವಹಿಸಲಾಗಿದೆ, ಅದೇ ಮಾದರಿಯಲ್ಲಿ ಈ ಪರೀಕ್ಷೆಗಳನ್ನು ಆಯಾ ಪರೀಕ್ಷಾ ಕೇಂದ್ರಗಳನ್ನು ಒಳಗೊಂಡಿರುವ ಜಿಲ್ಲಾ ಮುಖ್ಯಸ್ಥರು ಹಾಗೂ ಜಿಲ್ಲಾ ಡಳಿತದಿಂದ ಕ್ರಮಕೈಗೊಳ್ಳಲಾಗಿದೆ, ಪರೀಕ್ಷಾ ಕೊಠಡಿಯಲ್ಲಿ ಸ್ಯಾನಿಟೈಜೇಷನ್ ಮಾಡಲಾಗುವುದು, ಅಭ್ಯರ್ಥಿಗಳು ಒಂದೂವರೆ ಗಂಟೆ ಮುಂಚಿತವಾಗಿ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು, ಅವರನ್ನು ಥರ್ಮಲ್ ಸ್ಕಿçÃನಿಂಗ್ ಮಾಡಿ ಒಳಗೆ ಬಿಡಲಾಗುವುದು, ಕಡ್ಡಾಯವಾಗಿ ಮಾಸ್ಕ್ ಧರಿಸಿರಬೇಕು, ಅವರಿಗೆ ಹ್ಯಾಂಡ್ ಸ್ಯಾನಿಟೈಜರ್ ಹಾಗೂ ಕುಡಿಯುವ ನೀರನ್ನು ಪೂರೈಸಲಾಗುವುದು,

ಎಲ್ಲಾ ಪರೀಕ್ಷಾ ಕೇಂದ್ರಗಳನ್ನು ಸ್ಯಾನಿಟೈಸೇಷನ್ ಮಾಡಬೇಕು ಹಾಗೂ ಥರ್ಮಲ್ ಸ್ಕ್ಯಾನರ್, ಕೈಗವಸು ಮತ್ತು ಮಾಸ್ಕ್‍ಗಳನ್ನು ಕಡ್ಡಾಯವಾಗಿ ಬಳಸಿ ಪರೀಕ್ಷೆ ನಡೆಸಬೇಕು ಎಂದರಲ್ಲದೆ, ಯಾವುದೇ ತೊಂದರೆಯಾಗದಂತೆ ಕಟ್ಟುನಿಟ್ಟಿನ ಕ್ರಮವಹಿಸಿ ಪರೀಕ್ಷೆ ನಡೆಸಲು ಅಧಿಕಾರಿಗಳಿಗೆ ಆದೇಶ ನೀಡಲಾಗಿದೆ. ಪರೀಕ್ಷಾರ್ಥಿಗಳು ಬೆಳಗ್ಗೆ 8 ಗಂಟೆಗೆ ಪರೀಕ್ಷಾ ಕೇಂದ್ರಗಳಲ್ಲಿ ಹಾಜರಿರುವಂತೆ ಪ್ರವೇಶ ಪತ್ರದಲ್ಲಿ ಸೂಚನೆ ನೀಡಲಾಗಿದೆ ಹಾಗಾಗಿ ಮುಂಚೆಯೇ ತಪಾಸಣೆ ಮಾಡಿ ನಂತರ ಪರೀಕ್ಷಾ ಕೊಠಡಿಗೆ ಬಿಡುವಂತೆ ಅವರು ಅಧಿಕಾರಿಗಳಿಗೆ ಸೂಚಿಸಲಾಗಿದೆ.

ಇನ್ವಿಸಿಲೇಟರ್‍ಗಳು ಕಟ್ಟುನಿಟ್ಟಿನಿಂದ ಪರೀಕ್ಷೆ ನಡೆಸಬೇಕು ಹಾಗೂ ಪ್ರಶ್ನೆಪತ್ರಿಕೆಗಳು ಮತ್ತು ಒ.ಎಂ.ಆರ್. ಹಾಳೆಗಳನ್ನು ಸರಿಯಾಗಿ ಹಂಚಿಕೆ ಮಾಡಬೇಕು. ಜೊತೆಗೆ ಅಭ್ಯರ್ಥಿಗಳಿಗೆ ನೀಡಬೇಕಾದ ಒ.ಎಂ.ಆರ್. ಹಾಳೆಗಳನ್ನು ಖಚಿತ ಪಡಿಸಿಕೊಂಡು ನಂತರ ನೀಡಬೇಕು ಹಾಗೂ ಅಭ್ಯರ್ಥಿಗಳಿಗೆ ಮೀಸಲಿರಿಸಿರುವ ಕೊಠಡಿಯಲ್ಲಿಯೇ ಪರೀಕ್ಷೆ ನೀಡುವಂತೆ ಕ್ರಮವಹಿಸಲು ಸೂಚನೆ.

Check Also

ವಾಹನ ಸವಾರರಿಗೆ ಮತ್ತೊಂದು ಗುಡ್ ನ್ಯೂಸ್

Spread the loveಮೋಟಾರು ವಾಹನ ನಿಯಮಗಳಲ್ಲಿ ಕೇಂದ್ರ ಸರ್ಕಾರ ಬದಲಾವಣೆ ತಂದಿದ್ದು ಅಕ್ಟೋಬರ್ 1 ರಿಂದ ವಾಹನ ನಿಯಮಗಳಲ್ಲಿ ಬದಲಾವಣೆಯಾಗಲಿದೆ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!