Hiring Reporter’s For more Information Contact Above Number 876 225 4007 . Program producer
Home / Breaking News / ಮಾಜಿ ಶಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ

ಮಾಜಿ ಶಾಸಕನ ವಿರುದ್ಧ ಭುಗಿಲೆದ್ದ ಆಕ್ರೋಶ

Spread the love

ನೆಲಮಂಗಲ: ಬಿಜೆಪಿ ಪಕ್ಷದಲ್ಲಿದ್ದುಕೊಂಡೇ ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಟಿಕೆಟ್‍ಗಾಗಿ ಟವಲ್ ಹಾಸಿರುವ ಮಾಜಿ ಶಾಸಕರ ಧೋರಣೆಗೆ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. 2008ರಲ್ಲಿ ನೆಲಮಂಗಲದಿಂದ ಬಿಜೆಪಿ ಶಾಸಕರಾಗಿ ಆಯ್ಕೆಯಾಗಿದ್ದ ಎಂ.ವಿ.ನಾಗರಾಜ್ ನಂತರ ನಡೆದ ಚುನಾವಣೆಯಲ್ಲಿ ಹೀನಾಯ ಸೋಲು ಕಂಡಿದ್ದರು. ಆದರೂ ಸರ್ಕಾರದ ಮಟ್ಟದಲ್ಲಿ ತನ್ನ ಬೇಳೆ ಬೇಯಿಸಿಕೊಳ್ಳುತ್ತ ಸ್ಥಳೀಯ ಬಿಜೆಪಿ ಕಾರ್ಯಕರ್ತರ ಕಷ್ಟ ಸುಖ ಆಲಿಸದೆ ನಿರ್ಲಕ್ಷ್ಯ ವಹಿಸಿ, ಇದೀಗ ಪಕ್ಷಾಂತರಕ್ಕೆ ಸಿದ್ಧರಾಗಿರುವುದು ನಿಷ್ಠಾವಂತ ಕಾರ್ಯಕರ್ತರ ಕೆಂಗಣ್ಣಿಗೆ ಗುರಿಯಾಗಿದೆ.

ನಾಗರಾಜ್ ಅವರ ದೊಡ್ಡಪ್ಪ ಟಿ.ವಿ.ಮರಿಯಪ್ಪ ಅವರಿಗೆ ಬಿಜೆಪಿಯಲ್ಲಿ ಉತ್ತಮ ಹೆಸರಿತ್ತು. ಹೀಗಾಗಿ 2008ರಲ್ಲಿ ಕೇವಲ ಶಿಕ್ಷಕರಾಗಿದ್ದ ನಾಗರಾಜ್ ಅವರಿಗೆ ಟಿಕೆಟ್ ನೀಡಲಾಗಿತ್ತು.

ನೆಲಮಂಗಲದ ಕಾಂಗ್ರೆಸ್ ಮತ್ತು ಜೆಡಿಎಸ್ ಒಳಜಗಳದ ಹಿನ್ನೆಲೆಯಲ್ಲಿ ಇವರು ಪ್ರಥಮ ಬಾರಿಗೆ ಶಾಸಕರಾಗಿ ಆರಿಸಿ ಬಂದಿದ್ದರು.

ಗೆದ್ದು ಬಂದ ನಂತರ ಪಕ್ಷ ನಿಷ್ಠೆ ಇಟ್ಟುಕೊಳ್ಳದ ಇವರು ಬಳ್ಳಾರಿಯ ಜನಾರ್ಧನಾ ರೆಡ್ಡಿ ಗುಂಪಿನಲ್ಲಿ ಗುರುತಿಸಿಕೊಳ್ಳುವ ಮೂಲಕ ತಮ್ಮ ಬಂಡವಾಳ ಬಯಲು ಮಾಡಿಕೊಂಡಿದ್ದರು.

ಆದರೂ 2013ರಲ್ಲಿ ಬಿಜೆಪಿಯಿಂದ ಟಿಕೆಟ್ ದೊರೆತರೂ ನಾಗರಾಜ್ ಹೀನಾಯ ಸೋಲು ಅನುಭವಿಸಿದರು. ಆಗಲೂ ಪಕ್ಷ ಅವರನ್ನು ನಿಷ್ಠೆಯಿಂದಲೇ ನೋಡಿಕೊಂಡಿತ್ತು. 2018ರ ಚುನಾವಣೆಯಲ್ಲಿ ಟಿಕೆಟ್ ದೊರೆತರೂ ಗೆಲುವು ಮಾತ್ರ ಇವರಿಗೆ ಒಲಿಯಲೇ ಇಲ್ಲ. ಆದರೂ ತಮ್ಮ ಚಾಳಿ ಬಿಡದ ನಾಗರಾಜ್ ಜಾರಕಿಹೊಳಿ ಗುಂಪಿನೊಂದಿಗೆ ಗುರುತಿಸಿಕೊಂಡರು.

ನಾಗರಾಜ್ ಎರಡು ಬಾರಿ ಸೋಲಲು ಸ್ಥಳೀಯ ಬಿಜೆಪಿ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಜೆಡಿಎಸ್ ಮತ್ತು ಕಾಂಗ್ರೆಸ್ ಮತಗಳತ್ತ ಗಮನ ಹರಿಸಿದ್ದೇ ಪ್ರಮುಖ ಕಾರಣ ಎನ್ನಲಾಗಿದೆ. ಈಗಲೂ ಬಿಜೆಪಿ ಸರ್ಕಾರದಲ್ಲಿ ಬೇಕಾದ ಕೆಲಸ ಮಾಡಿಸಿಕೊಳ್ಳುತ್ತಿರುವ ನಾಗರಾಜ್ ಸ್ಥಳೀಯ ಕಾರ್ಯಕರ್ತರನ್ನು ಮರೆತೇ ಬಿಟ್ಟಿದ್ದಾರೆ.

ಡಿ.ಕೆ.ಶಿವಕುಮಾರ್ ಕೆಪಿಸಿಸಿ ಅಧ್ಯಕ್ಷರಾದ ನಂತರ ಒಕ್ಕಲಿಗರ ಪ್ರಾಬಲ್ಯವಿರುವ ನೆಲಮಂಗಲದಲ್ಲಿ ಆ ಸಮುದಾಯಕ್ಕೆ ಸೇರಿದ ಹಲವಾರು ಪ್ರಮುಖರು ಇತರ ಪಕ್ಷಗಳನ್ನು ತೊರೆದು ಕಾಂಗ್ರೆಸ್ ಸೇರಲು ತುದಿಗಾಲಲ್ಲಿ ನಿಂತಿದ್ದಾರೆ.

ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಇಲ್ಲವೇ ಜೆಡಿಎಸ್‍ನಿಂದ ಸ್ರ್ಪಸುವ ಒಕ್ಕಲಿಗ ಅಭ್ಯರ್ಥಿ ಗೆಲುವು ಸಾಸುವುದು ಖಚಿತವಾಗುತ್ತಿದ್ದಂತೆ ಬಿಜೆಪಿಯಲ್ಲಿದ್ದರೂ ಜೆಡಿಎಸ್ ಮತ್ತು ಕಾಂಗ್ರೆಸ್ ಮುಖಂಡರ ನಡುವಿನ ಒಡನಾಟ ಮುಂದುವರೆಸಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‍ನಿಂದ ಟಿಕೆಟ್ ನೀಡುವಂತೆ ಕೈ ಮುಖಂಡರ ಬೆನ್ನು ಬಿದ್ದಿದ್ದಾರೆ.

ಎರಡು ಬಾರಿ ಸೋತಿರುವ ಅಭ್ಯರ್ಥಿಗೆ ಟಿಕೆಟ್ ನೀಡುವುದಿಲ್ಲ ಎನ್ನುವುದಾದರೆ ಪುತ್ರಿ ಲಾವಣ್ಯ ಅವರಿಗೆ ಟಿಕೆಟ್ ನೀಡುವಂತೆ ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆ ಒತ್ತಡ ತರುತ್ತಿದ್ದಾರೆ.

ಅಧಿಕಾರದ ದುರಾಸೆಗಾಗಿ ಬಿಜೆಪಿಯಲ್ಲಿದ್ದುಕೊಂಡೇ ಅನ್ಯ ಪಕ್ಷಗಳಿಂದ ಟಿಕೆಟ್ ಪಡೆದು ಪಕ್ಷಕ್ಕೆ ದ್ರೋಹ ಬಗೆಯಲು ಮುಂದಾಗಿರುವ ನಾಗರಾಜ್ ಅವರ ವಿರುದ್ಧ ಶಿಸ್ತುಕ್ರಮ ಕೈಗೊಳ್ಳಬೇಕೆಂದು ಸ್ಥಳೀಯ ಬಿಜೆಪಿ ಕಾರ್ಯಕರ್ತರು ಒತ್ತಾಯಿಸಿದ್ದಾರೆ.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!