Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಶಾಶ್ವತ ಸೂರು ಕಲ್ಪಿಸುವಂತೆ ಡಿಸಿಎಂಗೆ ಮನವಿ.

ಶಾಶ್ವತ ಸೂರು ಕಲ್ಪಿಸುವಂತೆ ಡಿಸಿಎಂಗೆ ಮನವಿ.

 

ಬಾಗಲಕೋಟೆ:- ಶಾಶ್ವತ ಸೂರು ಕಲ್ಪಿಸುವಂತೆ ಒತ್ತಾಯಿಸಿ ಮುಧೋಳ ತಾಲೂಕಿನಲ್ಲಿರುವ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರ ಮನೆಗೆ ಸಂತ್ರಸ್ತರು ಮುತ್ತಿಗೆ ಹಾಕಿ ಮನವಿ ನೀಡಿದರು .
ಬೆಳಂಬೆಳಿಗ್ಗೆ ಕಾರಜೋಳ ಅವರ ಮನೆಗೆ ಸಂತ್ರಸ್ತರು ಪಾದಯಾತ್ರೆ ಮೂಲಕ ತೆರಳಿ ಪ್ರತಿಭಟನೆ ಬಿಸಿ ಮುಟ್ಟಿಸಿ ಚಳಿ ಬಿಡಿಸಿದರು. ಯುಕೆಪಿ ಮಾದರಿಯಲ್ಲಿ ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವಂತೆ ಆಗ್ರಹಿಸಿ ನೆರೆ ಸಂತ್ರಸ್ತರು ಮಳೆಗೆ ನಲುಗಿ ಹೋಗಿದ್ದು,ಸತತ ಮಳೆಯಿಂದಾಗಿ ಮನೆಯಲ್ಲಿ ಜೀವಭಯದಿಂದ ಮಲಗುವ ಪರಿಸ್ಥಿತಿ ಎದುರಾಗಿದೆ.
ಅಲ್ಲದೇ ಸೂಕ್ತ ಮನೆಯಿಲ್ಲದೇ ಮಕ್ಕಳು, ವಯೋವೃದ್ದರ ಸ್ಥತಿ ಚಿಂತಾಜನಕವಾಗಿದ್ದು, ದಿನದಿಂದ ತೀವ್ರ ತೊಂದರೆ ಅನುಭವಿಸುವಂತಾಗಿದೆ.
ಶೀಘ್ರವೇ ಸಂತ್ರಸ್ತರಿಗೆ ಸೂಕ್ತ ಹಾಗೂ ಶಾಶ್ವತ ಸ್ಥಳಕ್ಕೆ ಸ್ಥಳಾಂತರ ಮಾಡಿ ಸೂರು ಒದಗಿಸಬೇಕೆಂದು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಕಾರಜೋಳ ಶೀಘ್ರದಲ್ಲಿಯೇ ನೆರೆ ಸಂತ್ರಸ್ತರನ್ನ ಶಾಶ್ವತ ಸ್ಥಳಕ್ಕೆ ಸ್ಥಳಾಂತರ ಮಾಡಿ ಸೂಕ್ತ ಸೂರನ್ನು ಒದಗಿಸಲಾಗುವುದು ಎಂದು ಭರವಸೆ ನೀಡಿದರು.

Share

About Vijayalakshmi

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!