Hiring Reporter’s For more Information Contact Above Number 876 225 4007 . Program producer
Home / Breaking News / ಇಂದಿನಿಂದ ಬಜೆಟ್ ಅಧಿವೇಶನ ಪ್ರಾರಂಭ. ‌

ಇಂದಿನಿಂದ ಬಜೆಟ್ ಅಧಿವೇಶನ ಪ್ರಾರಂಭ. ‌

Spread the love

ಬೆಂಗಳೂರು : ಇಂದಿನಿಂದ ವಿಧಾನಮಂಡಲದ ಬಜೆಟ್ ಅಧಿವೇಶನ ಆರಂಭವಾಗಲಿದ್ದು, ಪ್ರಮುಖ ವಿಚಾರಗಳನ್ನು ಪ್ರಸ್ತಾಪಿಸಿ ಸರ್ಕಾರವನ್ನು ತರಾಟೆಗೆ ತೆಗೆದುಕೊಳ್ಳಲು ಪ್ರತಿಪಕ್ಷಗಳು ಸಜ್ಜಾಗಿವೆ.

ಅನುಷ್ಠಾನಗೊಳ್ಳದ 2019 – 20 ನೇ ಸಾಲಿನ ಆಯವ್ಯಯ ಕಾರ್ಯಕ್ರಮಗಳು, ರೈತರ ಸಾಲ ಮನ್ನಾ ಮಾಡಲು ನಿರ್ಲಕ್ಷ್ಯ, ಪೌರತ್ವ ತಿದ್ದುಪಡಿ ಕಾಯ್ದೆ – ಸಿಎಎ ವಿವಾದ, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್. ದೊರೆಸ್ವಾಮಿ ವಿರುದ್ಧದ ಹೇಳಿಕೆ, ಅದನ್ನು ಸಮರ್ಥಿಸುತ್ತಿರುವ ಬಿಜೆಪಿ ಸಚಿವರ ನಡಾವಳಿಕೆಗಳ ಬಗ್ಗೆ ಭಾರೀ ಆಕ್ರೋಶ ವ್ಯಕ್ತವಾಗುವ ಸಾಧ್ಯತೆಯಿದೆ. ಸಾಲ ಮನ್ನಾ, ದೊರೆಸ್ವಾಮಿ ಸೇರಿದಂತೆ ಕೆಲವು ವಿಷಯಗಳಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಜಂಟಿಯಾಗಿ ಹೋರಾಟ ನಡೆಸಲು ಉದ್ದೇಶಿಸಿವೆ.

ಈ ನಡುವೆ, ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸ್ವಾತಂತ್ರ್ಯ ಹೋರಾಟಗಾರ ಎಚ್.ಎಸ್.ದೊರೆಸ್ವಾಮಿ ವಿರುದ್ಧ ನೀಡಿರುವ ಹೇಳಿಕೆಗೆ ಕ್ಷಮೆ ಕೋರದಿದ್ದಲ್ಲಿ ಅಧಿವೇಶನಕ್ಕೆ ಅವಕಾಶ ನೀಡುವುದಿಲ್ಲ ಎಂದು ಕಾಂಗ್ರೆಸ್ ಎಚ್ಚರಿಕೆ ನೀಡಿದ್ದರೆ, ಅತ್ತ ಸಚಿವ ಈಶ್ವರಪ್ಪ ಕಾಂಗ್ರೆಸ್ ನವರು ಹೇಗೆ ಅಧಿವೇಶನ ನಡೆಯಲು ಬಿಡುವುದಿಲ್ಲವೇ ನಾವು ನೋಡುತ್ತೇವೆಂದು ಪ್ರತಿಸವಾಲು ಒಡ್ಡಿದ್ದಾರೆ. ಇದೇ ವಿಚಾರವಾಗಿ ಇಂದು ಅಧಿವೇಶನದಲ್ಲಿ ಗದ್ದಲ ಏರ್ಪಡುವ ನಿರೀಕ್ಷೆಯಿದೆ.

Check Also

ಆಗಸ್ಟ್ 8 ರ ವರೆಗೆ ರಾಜ್ಯದ ಹಲವೆಡೆ ಭಾರೀ ಮಳೆ ಸಾಧ್ಯತೆ

Spread the loveಆಗಸ್ಟ್ 8 ರವರೆಗೆ ರಾಜ್ಯದ ಕರಾವಳಿ, ದಕ್ಷಿಣ ಒಳನಾಡು, ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!