Hiring Reporter’s For more Information Contact Above Number 876 225 4007 . Program producer
Home / Breaking News / ಕರಂದ್ಲಾಜೆ ಹೇಳಿಕೆಗೆ ಡಿ.ಕೆ. ರವಿ ಪತ್ನಿ ಕುಸುಮಾ ತಿರುಗೇಟು

ಕರಂದ್ಲಾಜೆ ಹೇಳಿಕೆಗೆ ಡಿ.ಕೆ. ರವಿ ಪತ್ನಿ ಕುಸುಮಾ ತಿರುಗೇಟು

Spread the love

ರಾಜರಾಜೇಶ್ವರಿ ನಗರ ಕ್ಷೇತ್ರದ ಉಪ ಚುನಾವಣೆ ಕಣ ರಂಗೇರುತ್ತಿದೆ. ಮೂರು ಪಕ್ಷಗಳೂ ಆರ್‌ಆರ್ ನಗರದಲ್ಲಿ ತಮ್ಮ ಪ್ರಾಬ್ಯಲ್ಯ ತೋರಿಸಲು ಮುಂದಾಗುತ್ತಿವೆ. ಕಾಂಗ್ರೆಸ್ ಕುಸುಮಾ ಹನುಮಂತರಾಯಪ್ಪರನ್ನು ತನ್ನ ಅಭ್ಯರ್ಥಿ ಎಂದು ಘೋಷಣೆ ಮಾಡಿದೆ. ಡಿ.ಕೆ.ರವಿ ಪತ್ನಿಯನ್ನು ಚುನಾವಣೆಗೆ ನಿಲ್ಲಿಸಿರುವ ಕಾಂಗ್ರೆಸ್ ತಂತ್ರ ಅನೇಕ ಆಶ್ಚರ್ಯಗಳಿಗೆ ಎಡೆ ಮಾಡಿಕೊಟ್ಟಿದೆ.

ಕುಸುಮಾ ಚುನಾವಣೆಗೆ ನಿಂತ ಬೆನ್ನಲ್ಲೇ ಡಿ.ಕೆ.ರವಿ ಅಮ್ಮ ನನ್ನ ಮಗನ ಹೆಸರು ಬಳಸುವಂತಿಲ್ಲ ಎಂದು ಎಚ್ಚರಿಕೆ ನೀಡಿದ್ದರು. ಇದೀಗ ಸಂಸದೆ ಶೋಭಾ ಕರಂದ್ಲಾಜೆ ಕೂಡ ಡಿ.ಕೆ.ರವಿ ಹೆಸರು ಬಳಸಿ ಪ್ರಚಾರ ಮಾಡಿದರೆ ಒಳ್ಳೆಯದಾಗಲ್ಲ ಎಂಬ ಹೇಳಿಕೆ ನೀಡುವ ಮೂಲಕ ಕಿಚ್ಚು ಹಚ್ಚಿದ್ದಾರೆ. ಆದರೆ ಈ ಹೇಳಿಕೆಗೆ ಕುಸುಮಾ ನಯವಾಗಿಯೇ ತಿರುಗೇಟು ನೀಡಿದ್ದಾರೆ.

ಈ ಬಗ್ಗೆ ಫೇಸ್ ಬುಕ್ ಪೋಸ್ಟ್ ಮೂಲಕ ಕುಸುಮಾ ಅವರು ಶೋಭಾ ಕರಂದ್ಲಾಜೆಗೆ ಮಾತಿನಲ್ಲೇ ತಿವಿದಿದ್ದಾರೆ. ಪ್ರೀತಿಯ ಅಕ್ಕ, ನನ್ನ ಗಂಡನ ಹೆಸರಿನಲ್ಲಿ ರಾಜಕೀಯ ಮಾಡಿದವರು ಯಾರು? ಮಾಡುತ್ತಿರುವವರು ಯಾರು? ಎನ್ನುವುದನ್ನು ಇಡೀ ದೇಶವೇ ನೋಡಿದೆ, ನೋಡುತ್ತಿದೆ. ಈ ಸಂದರ್ಭದಲ್ಲಿ ನನಗೆ ಅಕ್ಕ ಮಹಾದೇವಿಯವರ ನೊಂದವರ ನೋವ ನೋಯದವರೆತ್ತ ಬಲ್ಲರೊ?

ಎಂಬ ವಚನ ನೆನಪಿಗೆ ಬರುತ್ತಿದೆ. ರವಿ ಅವರ ಹೆಸರನ್ನು ಬಳಸಿಕೊಂಡವರಿಗೆ ಒಳ್ಳೆಯದಾಗುವುದಿಲ್ಲ ಎಂದಿದ್ದೀರಿ. ಇದು ನಿಮಗೆ ನೀವೇ ಹೇಳಿದಂತೆ ಇದೆ. ಕನ್ನಡಿ ಮುಂದೆ ನಿಂತು ಇನ್ನೊಮ್ಮೆ ಈ ಹೇಳಿಕೆ ಕೊಟ್ಟು ನೋಡಿ. ಸತ್ಯ ಮನದಟ್ಟಾಗಬಹುದು ಎನ್ನುವ ಮೂಲಕ ಸರಿಯಾಗಿ ಚಾಟಿ ಬೀಸಿದ್ದಾರೆ.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!