Hiring Reporter’s For more Information Contact Above Number 876 225 4007 . Program producer
Home / Breaking News / ಪಶ್ಚಿಮ ಪದವೀಧರ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಶಂಕರ ಚನ್ನಪ್ಪ ಕಲ್ಲೂರ ಗೆಲವು ಖಚಿತ: ಹೊರಟ್ಟಿ

ಪಶ್ಚಿಮ ಪದವೀಧರ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಶಿವಶಂಕರ ಚನ್ನಪ್ಪ ಕಲ್ಲೂರ ಗೆಲವು ಖಚಿತ: ಹೊರಟ್ಟಿ

Spread the love

ಹುಬ್ಬಳ್ಳಿ :ಕರ್ನಾಟಕ ವಿಧಾನ ಪರಿಷತ್ ಚುನಾವಣೆಯ ಪಶ್ಚಿಮ ಪದವೀಧರ ಮತಕ್ಷೇತ್ರದ ಜೆಡಿಎಸ್ ಅಭ್ಯರ್ಥಿಯಾಗಿ ಶಿವಶಂಕರ ಚನ್ನಪ್ಪ ಕಲ್ಲೂರ ಸ್ಪರ್ಧಿಸಿದ್ದು, ಇವರ ಗೆಲುವು ಖಚಿತ ಎಂದು ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ ತಿಳಿಸಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು,
ಪಶ್ಚಿಮ ಪದವೀಧರ ಚುನಾವಣೆಗೆ ಇಂದಿನಿಂದ ಚುನಾವಣಾ ಪ್ರಚಾರಕ್ಕೆ ಚಾಲನೆ ನೀಡಲಾಗುತ್ತಿದೆ. ನಮ್ಮ ಅಭ್ಯರ್ಥಿ ಗೆಲುವಿಗಾಗಿ ಪ್ರಾಮಾಣಿಕವಾದ ಪ್ರಯತ್ನ ನಡೆಸಿದ್ದೇವೆ. ಈಗಾಗಲೇ ಬೇರೆ ಬೇರೆ ಪಕ್ಷದ ಅಭ್ಯರ್ಥಿಗಳು ನನ್ನನ್ನು ಸಂಪರ್ಕ ಮಾಡಿದ್ದಾರೆ. ಬೆಂಬಲ ಸೂಚಿಸುವಂತೆ ನನಗೆ ಮನವಿ ಮಾಡಿದ್ದಾರೆ. ಆದರೆ ನಾನು ನಮ್ಮ ಪಕ್ಷದ ಅಭ್ಯರ್ಥಿ ಶಿವಶಂಕರ ಕಲ್ಲೂರ ಅವರಿಗೆ ಮಾತ್ರ ಬೆಂಬಲಿಸುತ್ತೇನೆ ಎಂದರು.

ಮುಂದುವರೆದು ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರದಲ್ಲಿದೆ. ಅವರು ಪದವೀಧರರಿಗಾಗಿ ಈವರೆಗೆ ಏನು ಮಾಡಿದ್ದಾರೆ ಬಹಿರಂಗಪಡಿಸಲಿ. ಈ ಕುರಿತು ಬಹಿರಂಗ ವೇದಿಕೆ ಮೇಲೆ ನಾವು ಚರ್ಚೆಗೆ ಸಿದ್ಧ ಎಂದು ಸವಾಲ ಹಾಕಿದರು. ನಾವು ಈವರೆಗೂ ಯಾರ ನಂಬಿಕೆಯನ್ನು ಕಳೆದುಕೊಂಡಿಲ್ಲ. ಅದೇ ನಂಬಿಕೆಯ ಮೇಲೆ ನಾವು ಈಗ ಪದವೀಧರರ ಚುನಾವಣೆ ಎದುರಿಸಲು ಸಿದ್ಧರಾಗಿದ್ದೇವೆ ಎಂದು ತಿಳಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮುಖಂಡರಾದ ಗುರುರಾಜ ಹುಣಸಿಮರದ, ರಾಜಣ್ಣ ಕೊರವಿ, ಶಿವಣ್ಣ ಹುಬ್ಬಳ್ಳಿ, ಗಂಗಾಧರ ಹಿರೇಮಠ ಸೇರಿದಂತೆ ಮುಂತಾದವರು ಇದ್ದರು.

Check Also

ಬ್ಯಾಂಕ್‌ಗಳ ಸಾಲಗಳ ಮೇಲಿನ ಚಕ್ರಬಡ್ಡಿ ಮನ್ನಾ

Spread the loveನವದೆಹಲಿ: ನವರಾತ್ರಿ ಸಂದರ್ಭದಲ್ಲಿ ಸಾಲಗಾರರಿಗೆ ಕೇಂದ್ರ ಸರ್ಕಾರ ಶುಭ ಸುದ್ದಿ ನೀಡಿದೆ. ಮಾರ್ಚ್ 1ರಿಂದ ಆಗಸ್ಟ್ 31ರವರೆಗಿನ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!