Hiring Reporter’s For more Information Contact Above Number 876 225 4007 . Program producer
Home / Breaking News / ಟಿಪ್ಪರ್ ಲಾರಿ ಡಿಕ್ಕಿ: ನರ್ಸಿಂಗ್ ವಿದ್ಯಾರ್ಥಿನಿ ಸಾವು

ಟಿಪ್ಪರ್ ಲಾರಿ ಡಿಕ್ಕಿ: ನರ್ಸಿಂಗ್ ವಿದ್ಯಾರ್ಥಿನಿ ಸಾವು

Spread the love

ಚಿಕ್ಕಬಳ್ಳಾಪುರ: ಸ್ಕೂಟಿಯಲ್ಲಿ ತೋಟಕ್ಕೆ ಹೋಗಿ ಮನೆಗೆ ವಾಪಸ್ಸು ಬರುತ್ತಿದ್ದ ವೇಳೆ ಹಿಂಬದಿಯಿಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ನರ್ಸಿಂಗ್ ಓದುತ್ತಿದ್ದ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ನಂದಿ ಠಾಣೆ ವ್ಯಾಪ್ತಿಯ ಬಂಡಹಳ್ಳಿ ಸಮೀಪ ಮಂಗಳವಾರ ನಡೆದಿದೆ.

ಮೃತ ವಿದ್ಯಾರ್ಥಿನಿಯನ್ನು ಬಂಡಹಳ್ಳಿ ಶಿವರಾಜ್ ಎಂಬುವರ ಪುತ್ರಿ ವರ್ಷ (19) ಎಂದು ಗುರುತಿಸಲಾಗಿದ್ದು ಅಪಘಾತದ ಬಳಿಕ ಲಾರಿ ಚಾಲಕ ಲಾರಿಯನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ.

ವರ್ಷ ತಮ್ಮ ತೋಟಕ್ಕೆ ಹೋಗಿ ಮನೆಗೆ ಬರುವಾಗ ತಿರ‌್ನಹಳ್ಳಿ ಕಡೆಯಿಂದ ಮುದ್ದೇನಹಳ್ಳಿ ಕಡೆಗೆ ಹೊರಟಿದ್ದ ಟಿಪ್ಪರ್ ಲಾರಿ ಸ್ಕೂಟಿಗೆ ಡಿಕ್ಕಿ ಹೊಡೆದು ಸ್ವಲ್ಪ ದೂರ ದ್ವಿಚಕ್ರ ವಾಹನವನ್ನು ಎಳೆದುಕೊಂಡು ಹೋಗಿದೆ. ಈ ವೇಳೆ ವರ್ಷ ತೀವ್ರವಾಗಿ ಗಾಯಗೊಂಡಿದ್ದು ಕೂಡಲೇ ಆಕೆಯನ್ನು ಆಸ್ಪತ್ರೆಗೆ ಸಾಗಿಸುವ ಸಂದರ್ಭದಲ್ಲಿ ಮಾರ್ಗಮಧ್ಯೆ ಅಸುನೀಗಿದ್ದಾಳೆ.

Check Also

ವೇತನದ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ಭರ್ಜರಿ ಗುಡ್ ನ್ಯೂಸ್

Spread the loveಬೆಂಗಳೂರು : ವೇತನದ ನಿರೀಕ್ಷೆಯಲ್ಲಿದ್ದ ಶಿಕ್ಷಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!