Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಹುಬ್ಬಳ್ಳಿ / ನಾಳೆ ನಾಯ್ಕರ್ ಶಿಕ್ಷಣ ಸಂಸ್ಥೆಯ ಮಹಾವಿದ್ಯಾಲಯ ಮತ್ತು ನೂತನ ಕಟ್ಟಡದ ಉದ್ಘಾಟನೆ.‌

ನಾಳೆ ನಾಯ್ಕರ್ ಶಿಕ್ಷಣ ಸಂಸ್ಥೆಯ ಮಹಾವಿದ್ಯಾಲಯ ಮತ್ತು ನೂತನ ಕಟ್ಟಡದ ಉದ್ಘಾಟನೆ.‌

 

ಹುಬ್ಬಳ್ಳಿ: ನಾಯ್ಕರ ಶಿಕ್ಷಣ ಸಂಸ್ಥೆಯ ಮಾಲತೇಶ ಸ್ವತಂತ್ರ ವಿಜ್ಞಾನ ಮತ್ತು ವಾಣಿಜ್ಯ ಪದವಿ ಪೂರ್ವ ಮಹಾವಿದ್ಯಾಲಯದ ನೂತನ ಕಟ್ಟಡದ ಉದ್ಘಾಟನೆ ಸಮಾರಂಭವು ತಾಲೂಕಿನ ಶಿರಗುಪ್ಪಿ ಗ್ರಾಮದಲ್ಲಿ ನ.03 ರಂದು ಬೆಳಿಗ್ಗೆ 11 ಕ್ಕೆ ನಡೆಯಲಿದೆ ಎಂದು ಸಂಸ್ಥೆಯ ಸಂಸ್ಥಾಪಕ ಮತ್ತು ಪ್ರಾಚಾರ್ಯ ಡಾ.ಸಿ.ಎನ್.ನಾಯ್ಕರ ಹೇಳಿದರು.
ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂದು ಮಹಾವಿದ್ಯಾಲಯವನ್ನು ಹಾಗೂ ನೂತನ ಕಟ್ಟಡದ ಉದ್ಘಾಟನೆಯನ್ನು ರೈಲ್ವೆ ಖಾತೆಯ ರಾಜ್ಯ ಸಚಿವ ಸುರೇಶ ಅಂಗಡಿ ಮಾಡಲಿದ್ದು, ದಿವ್ಯ ಸಾನಿಧ್ಯವನ್ನು ಮಣಕವಾಡದ ಅಭಿನವ ಮೃತ್ಯುಂಜಯ ಸ್ವಾಮಿಗಳು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಚಿವ ಜಗದೀಶ್ ಶೆಟ್ಟರ್ ಆಗಮಿಸಲಿದ್ದಾರೆ ಎಂದರು.
ಇನ್ನೂ ಸಾಂಸ್ಕೃತಿಕ ಉತ್ಸವವನ್ನು ಪಂಚ ಭಾಷಾ ಚಲನಚಿತ್ರದ ನಟಿ ಪ್ರೇಮಾ ಮಾಡಲಿದ್ದು, ಅತಿಥಿಗಳಾಗಿ ನವಲಗುಂದ ಶಾಸಕ ಶಂಕರಪಾಟೀಲ ಮುನೇನಕೊಪ್ಪ, ವಿಧಾನ ಪರಿಷತ್ ಸದಸ್ಯ ಅರುಣ ಶಹಾಪುರ, ಉದ್ಯಮಿ ಬಸಂತ ಕುಮಾರ ಪಾಟೀಲ ಆಗಮಿಸಲಿದ್ದಾರೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ನಾಯ್ಕರ್ ಶಿಕ್ಷಣ ಸಂಸ್ಥೆಯ ಸಂಸ್ಥಾಪಕ ಮತ್ತು ಪ್ರಾಚಾರ್ಯ ಡಾ.ಸಿ.ಎನ್.ನಾಯ್ಕರ ವಹಿಸಲಿದ್ದಾರೆ ಎಂದರು.
ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಮಟ್ಟದ ಶಿಕ್ಷಣವನ್ನು ನೀಡುವ ಉದ್ದೇಶದಿಂದ ಮಹಾವಿದ್ಯಾಲಯವನ್ನು ಪ್ರಾರಂಭ ಮಾಡಲಾಗಿದ್ದು, ಅತಿ ಕಡಿಮೆ ಪ್ರವೇಶ ಶುಲ್ಕದಲ್ಲಿ ವಿದ್ಯಾರ್ಥಿಗಳಿಗೆ ಎಲ್ಲ ಸೌಲಭ್ಯಗಳನ್ನು ನೀಡಲಾಗಿದ್ದು, ಗ್ರಾಮೀಣ ಭಾಗದ ಪ್ರತಿಭಾವಂತ ವಿದ್ಯಾರ್ಥಿಗಳು ಇದರ ಸದುಪಯೋಗ ಪಡಿಸಿಕೊಳ್ಳಬೇಕೆಂದು ತಿಳಿಸಿದರು.
ಪತ್ರಿಕಾಗೋಷ್ಠಿಯಲ್ಲಿ ಸಂಸ್ಥೆಯ ಅಧ್ಯಕ್ಷೆ ಶ್ವೇತಾ ನಾಯ್ಕರ, ಕಾರ್ಯದರ್ಶಿ ಶಿವಪ್ಪ ಅಣ್ಣಿಗೇರಿ, ನಿರ್ದೇಶಕ ಗಂಗಾಧರ, ನಿಂಗಪ್ಪ ನಾಯ್ಕರ ಉಪಸ್ಥಿತರಿದ್ದರು.

Share

About Shaikh BIG TV NEWS, Hubballi

Check Also

Featured Video Play Icon

ಬಾ ಬಾ ನಾ ರಡಿ….ರಾಬರ್ಟ್ ಗೆ ಜೈ ಅಂದ ಅಭಿಮಾನಿಗಳು | Roberrt movie craze after releasing | BIG TV NEW

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!