Breaking News
Hiring Reporter’s For more Information Contact Above Number 876 225 4007 . Program producer
Home / ಸುದ್ದಿ / ಕರ್ನಾಟಕ / ಗ್ರಾಮೀಣ ಭಾಗದ ಜನರ ಸೇವೆಗೆ ವಿಲೇಜ್ ಒನ್ ಆರಂಭ.‌

ಗ್ರಾಮೀಣ ಭಾಗದ ಜನರ ಸೇವೆಗೆ ವಿಲೇಜ್ ಒನ್ ಆರಂಭ.‌

ಕರ್ನಾಟಕ: ಗ್ರಾಮೀಣ ಪ್ರದೇಶದ ಜನತೆಗೆ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಲು ರಾಜ್ಯ ಸರ್ಕಾರ ತಯಾರಾಗಿದೆ. ನಗರ ಮಟ್ಟದಲ್ಲಿ ಆರಂಭವಾಗಿರುವ ಬೆಂಗಳೂರು ಒನ್, ಕರ್ನಾಟಕ ಒನ್ ಮಾದರಿಯಲ್ಲಿ ಗ್ರಾಮೀಣ ಪ್ರದೇಶದ ಜನತೆಗಾಗಿ ವಿಲೇಜ್ ಒನ್ ಆರಂಭವಾಗಲಿದೆ.
ಗ್ರಾಮೀಣ ಪ್ರದೇಶದಲ್ಲಿ ಈ ಸೇವೆಯನ್ನು ಆರಂಭಿಸಲು ಈಗಾಗಲೇ ಸಕಲ ಸಿದ್ಧತೆ ನಡೆಸಲಾಗಿದ್ದು, ಮುಖ್ಯಮಂತ್ರಿ ಯಡಿಯೂರಪ್ಪನವರ ಅನುಮತಿಗಾಗಿ ಕಾಯಲಾಗುತ್ತಿದೆ. ಮೊದಲ ಹಂತದಲ್ಲಿ 56 ವಿವಿಧ ಸೇವೆಗಳು ಗ್ರಾಮೀಣ ಪ್ರದೇಶದ ಜನತೆಗೆ ಲಭ್ಯವಾಗಲಿವೆ.
ಹೆಚ್ಚು ಜನಸಂಖ್ಯೆ ಇರುವ ಗ್ರಾಮಗಳಲ್ಲಿ ಸೇವಾ ಪ್ರತಿನಿಧಿಗಳನ್ನು ನೇಮಿಸಿಕೊಳ್ಳಲು ನಿರ್ಧರಿಸಲಾಗಿದ್ದು, ಇವರುಗಳು ಸ್ವಂತ ಖರ್ಚಿನಲ್ಲಿ ಕಂಪ್ಯೂಟರ್, ಇಂಟರ್ನೆಟ್ ಹಾಗೂ ಪ್ರಿಂಟರ್ ವ್ಯವಸ್ಥೆ ಮಾಡಿಕೊಳ್ಳಬೇಕಾಗುತ್ತದೆ. ಸೇವೆ ಬಯಸುವ ಜನತೆಗೆ ಶುಲ್ಕ ವಿಧಿಸಲು ಅವಕಾಶ ಮಾಡಿಕೊಡಲಾಗುತ್ತದೆ.
ವಿಲೇಜ್ ಒನ್ ಸೇವೆ ಆರಂಭವಾದ ಬಳಿಕ ಗ್ರಾಮೀಣ ಪ್ರದೇಶದ ಜನತೆ ಪಹಣಿ ಸೇರಿದಂತೆ ವಿವಿಧ ದಾಖಲಾತಿಗಳನ್ನು ಪಡೆದುಕೊಳ್ಳಲು ನಾಡಕಚೇರಿ ಅಥವಾ ತಾಲೂಕು ಕಚೇರಿಗೆ ಅಲೆಯುವ ಅಗತ್ಯವಿರುವುದಿಲ್ಲ. ಇದರ ಜೊತೆಗೆ ಗ್ರಾಮೀಣ ಪ್ರದೇಶದ ಯುವ ಜನತೆಗೆ ಸ್ವಯಂ ಉದ್ಯೋಗ ಕಲ್ಪಿಸಿದಂತಾಗುತ್ತದೆ ಎಂಬ ಉದ್ದೇಶವನ್ನು ಸರ್ಕಾರ ಹೊಂದಿದೆ.

Share

About ramu BIG TV NEWS, Kolar

Check Also

Featured Video Play Icon

ಎಲ್ಲಡೆ ಶಿವನ ಆರಾಧನೆ ಭಕ್ತಿಯಲ್ಲಿ ಮಿಂದೆದ್ದ ಹುಬ್ಬಳ್ಳಿಯ ಜನರು | MAHA SHIVARATRI | BIG TV NEWS

Shaikh BIG TV NEWS, Hubballi See author's posts Share

Leave a Reply

Your email address will not be published. Required fields are marked *

error: Content is protected !!