Hiring Reporter’s For more Information Contact Above Number 876 225 4007 . Program producer
Home / Breaking News / ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿನಾಯಕ್​ ಜೋಶಿ

ದಾಂಪತ್ಯ ಜೀವನಕ್ಕೆ ಕಾಲಿಟ್ಟ ವಿನಾಯಕ್​ ಜೋಶಿ

Spread the love

ಆರ್​ಜೆ/ ನಟ ವಿನಾಯಕ್​ ಜೋಶಿ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ತಮ್ಮ ಬಹುಕಾಲದ ಗೆಳತಿ ವರ್ಷ ಬೆಳವಾಡಿಯ ಜೊತೆ ಸಪ್ತಪದಿ ತುಳಿದಿದ್ದಾರೆ ವಿನಾಯಕ್​ ಜೋಶಿ.

ಬ್ಯಾಡ್ಮಿಂಟನ್ ಚಾಂಪಿಯನ್ ಆಗಿದ್ದ ವರ್ಷ ಬೆಳವಾಡಿ,ವರ್ಲ್ಡ್ ಱಂಕಿಗ್​ನಲ್ಲಿ 120 ನೇ ಸ್ಥಾನದಲ್ಲಿದ್ರು. ಸದ್ಯಕ್ಕೆ ಬ್ಯಾಡ್ಮಿಂಟನ್ ಕೋಚ್ ಆಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಧರ್ಮಗಿರಿ ಮಂಜುನಾಥ ದೇವಸ್ಥಾನದಲ್ಲಿ ವಿವಾಹ ಸಮಾರಂಭ ನೆರವೇರಿದೆ.

ಇಬ್ಬರು ಬಾಲ್ಯದ ಗೆಳೆಯರಾಗಿದ್ದು, ಕೆಲ ವರ್ಷಗಳ ಕಾಲ ಬೇರೆ ಬೇರೆ ಊರುಗಳಲ್ಲಿ ವಾಸಿಸುವಂತಾಗಿತ್ತು. ಎರಡು ದಶಕದ ನಂತರ ಅಚಾನಕ್ಕಾಗಿ ಇವರಿಬ್ಬರ ಭೇಟಿಯಾಗಿತ್ತು. ಅನಂತರ ಮತ್ತೆ ಸ್ನೇಹ ಬೆಳೆದು,ಪ್ರೀತಿಯಲ್ಲಿ ಬಿದ್ದು ಇಂದು ಮದುವೆಯಾಗಿದ್ದಾರೆ. ಇನ್ನು ಮದುವೆಯಲ್ಲಿ ಕುಟುಂಬಸ್ಥರು, ಸ್ನೇಹಿತರು ಹಾಗೂ ಆಪ್ತರು ಮಾತ್ರ ಭಾಗಿಯಾಗಿದ್ದರು. 15 ರಿಂದ 55 ವರ್ಷದೊಳಗಿನವರಿಗಷ್ಟೇ ಮದುವೆ ಅವಕಾಶವಿದ್ದು, ಕಡಿಮೆ ಮಂದಿ ಮದುವೆಯಲ್ಲಿ ಭಾಗಿದ್ದರು. ಕೋವಿಡ್ ನಿಯಂತ್ರಣಕ್ಕೆ ಬಂದ ನಂತರ ಮತ್ತೊಮ್ಮೆ ಸ್ನೇಹಿತರಿಗಾಗಿ ಕಾರ್ಯಕ್ರಮ ಇಟ್ಟುಕೊಳ್ತಿದ್ದಾರೆ ಅನ್ನೋ ಮಾಹಿತಿ ಸಿಕ್ಕಿದೆ.

Check Also

ತಮಿಳು ಚಿತ್ರರಂಗದ ಖ್ಯಾತ ನಟ ಆತ್ಮಹತ್ಯೆಗೆ ಶರಣು

Spread the loveಚೆನ್ನೈ: ಕೌಟುಂಬಿಕ ಕಲಹಕ್ಕೆ ಬೇಸತ್ತು ತಮಿಳು ಚಿತ್ರರಂಗದ ಉದಯೋನ್ಮುಖ ನಟ ತೆನ್ನರಸು ಆತ್ಮಹತ್ಯೆಗೆ ಶರಣಾಗಿದ್ದಾರೆ. 2012ರಲ್ಲಿ ಬಿಡುಗಡೆಯಾಗಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!