Hiring Reporter’s For more Information Contact Above Number 876 225 4007 . Program producer
Home / Breaking News / ಸುಧಾಮೂರ್ತಿ ರವರಿಗೆ ಗೌರವ ಡಾಕ್ಟರೇಟ್

ಸುಧಾಮೂರ್ತಿ ರವರಿಗೆ ಗೌರವ ಡಾಕ್ಟರೇಟ್

Spread the love

ಇನ್ಫೋಸಿಸ್​​​ ಫೌಂಡೇಶನ್ ಅಧ್ಯಕ್ಷೆ ಸುಧಾಮೂರ್ತಿ ಅವರಿಗೆ ಈ ಬಾರಿ ಮೈಸೂರು ವಿಶ್ವವಿದ್ಯಾಲಯವು ಗೌರವ ಡಾಕ್ಟರೇಟ್ ನೀಡಲು ನಿರ್ಧರಿಸಿದೆ.

ಕ್ರಾಫರ್ಡ್ ಭವನದಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮೈಸೂರು ವಿವಿ ಕುಲಪತಿ ಪ್ರೊ‌.ಜಿ.ಹೇಮಂತ್ ಕುಮಾರ್ ಅವರು, ಅ.19ರಂದು ನಡೆಯಲಿರುವ ಮೈಸೂರು ವಿಶ್ವವಿದ್ಯಾಲಯದ 100ನೇ ಘಟಿಕೋತ್ಸವದಲ್ಲಿ‌ ಸುಧಾಮೂರ್ತಿ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲಾಗುವುದು‌ ಎಂದರು.

ಘಟಿಕೋತ್ಸವ ಕಾರ್ಯಕ್ರಮ ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ವರ್ಚುವಲ್ ಲೈವ್​ನಲ್ಲಿ‌ 25 ನಿಮಿಷಗಳ ಕಾಲ ಭಾಷಣ ಮಾಡಲಿದ್ದಾರೆ. ರಾಜ್ಯ ಚುನಾವಣಾ ಆಯುಕ್ತ ಸಂಜೀವ್ ಕುಮಾರ್ ಕೂಡಾ ಪಿಹೆಚ್‌ಡಿ ಸ್ವೀಕಾರ ಮಾಡಲಿದ್ದಾರೆ. ಕೊರೊನಾ ಹಿನ್ನೆಲೆ 100 ಜನರಿಗೆ ಮಾತ್ರ ಅವಕಾಶ ನೀಡಲಾಗುವುದು. ಪದವಿ ಪ್ರದಾನ ಕಾರ್ಯಕ್ರಮದಲ್ಲಿ ರಾಜ್ಯಪಾಲ ವಜುಬಾಯಿ ರೂಡಾಭಾಯ್ ವಾಲಾ, ಉಪಮುಖ್ಯಮಂತ್ರಿ ಡಾ.ಅಶ್ವತ್ಥ್​​​ ನಾರಾಯಣ್ ಭಾಗಿಯಾಗಲಿದ್ದಾರೆ ಎಂದರು.

Check Also

ಭಾರತೀಯ ಕ್ರಿಕೆಟ್ ದಿಗ್ಗಜ ಕಪಿಲ್ ದೇವ್​ಗೆ ಹೃದಯಾಘಾತ!

Spread the love ನವ ದೆಹಲಿ: ಭಾರತಕ್ಕೆ ಚೊಚ್ಚಲ ವಿಶ್ವಕಪ್ ತಂದುಕೊಟ್ಟ ಮಾಜಿ ನಾಯಕ ಕಪಿಲ್ ದೇವ್ ಹೃದಯಾಘಾತಕ್ಕೆ ಒಳಗಾಗಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!