Breaking News
Hiring Reporter’s For more Information Contact Above Number 876 225 4007 . Program producer
Home / ಜಿಲ್ಲೆ / ಕರ್ನಾಟಕ / ಡಿಕೆಶಿಗೆ ಅದ್ದೂರಿ ಸ್ವಾಗತ ಸರಿಯಲ್ಲಾ : ಆರ್.ಅಶೋಕ

ಡಿಕೆಶಿಗೆ ಅದ್ದೂರಿ ಸ್ವಾಗತ ಸರಿಯಲ್ಲಾ : ಆರ್.ಅಶೋಕ

ಹುಬ್ಬಳ್ಳಿ:- ಮಾಜಿ ಸಚಿವ ಡಿಕೆ ಶಿವಕುಮಾರ ಅವರಿಗೆ ಅದ್ದೂರಿ ಸ್ವಾಗತ ನೀಡಿರುವುದು ಸರಿ ಅಲ್ಲ. ಡಿಕೆಶಿ ಯುದ್ಧ ಗೆದ್ದು ಬಂದವರಂತೆ ವರ್ತಿಸುತ್ತಿದ್ದಾರೆ. ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ಇರುವಾಗ ಈ ರೀತಿಯ ವರ್ತನೆ ಸರಿ ಅಲ್ಲ ಎಂದು ಕಂದಾಯ ಸಚಿವ ಆರ್ ಅಶೋಕ ಹೇಳಿದರು.
ನಗರಲ್ಲಿಂದು ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಅನರ್ಹಗೊಂಡ ಶಾಸಕರಿಗೆ ಉಪ ಚುನಾವಣೆಯಲ್ಲಿ ಬಿಜೆಪಿ ಟಿಕೆಟ್ ನೀಡುವ ಬಗ್ಗೆ ಇನ್ನೂ ನಿರ್ಧಾರ ಆಗಿಲ್ಲ. ಆದ್ರೆ, ಯಾರ ಕಾರಣದಿಂದ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಸ್ತಿತ್ವಕ್ಕೆ ಬಂದಿದೆ ಎಂಬುದು ಪಕ್ಷದ ಕಾರ್ಯಕರ್ತರಿಗೆ ಗೊತ್ತಿದೆ.
ಅನರ್ಹಗೊಂಡ ಶಾಸಕರ ಬಗ್ಗೆ ಸುಪ್ರಿಂ ಕೋರ್ಟ್ ಇನ್ನೂ ಅಂತಿಮ ತೀರ್ಪು ನೀಡುವುದು
ಇದೆ. ತೀರ್ಪು ಪ್ರಕಟಗೊಂಡ ನಂತರ ಬಿಜೆಪಿ ಟಿಕೆಟ್ ಅಂತಿಮಗೊಳಿಸಲಾಗುವುದು.ಅನರ್ಹರು ಇನ್ನೂ ಬಿಜೆಪಿ ಸೇರಿಲ್ಲ ಎಂದರು.
ನೆರೆ ಸಂತ್ರಸ್ತರಿಗೆ ಈಗಾಗಲೇ ಪರಿಹಾರ ನೀಡಲಾಗುತ್ತಿದೆ. ಮನೆ ಬಿದ್ದವರಿಗೆ 5 ಲಕ್ಷ ರೂ. ಹಾಗೂ 30/40 ನಿವೇಶನ ಉಚಿತವಾಗಿ ನೀಡಲಾಗುತ್ತದೆ. ಪರಿಹಾರ ನೀಡಲು ಯಾವುದೇ ಆರ್ಥಿಕ ಕೊರತೆ ಇಲ್ಲ ಎಂದು ಸ್ಪಷ್ಟಪಡಿಸಿದರು.

Share

About solaragoppa

Check Also

ವಿನಯ ಕುಲಕರ್ಣಿ ಬಂಧನ-ರಾಜಕೀಯ ಪ್ರೇರಿತ: ಬಿ.ಕೆ.ಹರಿಪ್ರಸಾದ

ಧಾರವಾಡ: ಮಾಜಿ ಸಚಿವ ವಿನಯ ಕುಲಕರ್ಣಿಯವರನ್ನ ಸಿಬಿಐ ಬಂಧನ ಮಾಡಿದ್ದು ರಾಜಕೀಯ ದುರುದ್ದೇಶದಿಂದ ಎಂದು ವಿಧಾನಪರಿಷತ್ ಸದಸ್ಯ ಬಿ.ಕೆ.ಹರಿಪ್ರಸಾದ ಹೇಳಿದರು. …

Leave a Reply

Your email address will not be published. Required fields are marked *

error: Content is protected !!