Breaking News
Hiring Reporter’s For more Information Contact Above Number 876 225 4007 . Program producer
Home / Breaking News / ಬಂಡಿಪುರಕ್ಕೆ ಭೇಟಿ ನೀಡಿದ ವನ್ಯಜೀವಿ ಸಂರಕ್ಷಣಾ ರಾಯಭಾರಿ ಶ್ರೀಮುರುಳಿ.

ಬಂಡಿಪುರಕ್ಕೆ ಭೇಟಿ ನೀಡಿದ ವನ್ಯಜೀವಿ ಸಂರಕ್ಷಣಾ ರಾಯಭಾರಿ ಶ್ರೀಮುರುಳಿ.

 

ಗುಂಡ್ಲುಪೇಟೆ: ರಾಜ್ಯ ಸರ್ಕಾರವು ವನ್ಯ ಜೀವಿ ಸಂರಕ್ಷಣಾ ರಾಯಭಾರಿಯಾಗಿ ರೋರಿಂಗ್ ಸ್ಟಾರ್ ಶ್ರೀಮುರುಳಿಯವರನ್ನು ಆಯ್ಕೆ ಮಾಡಿದ ಬಳಿಕ ಮೊದಲ ಬಾರಿಗೆ ಬಂಡೀಪುರಕ್ಕೆ ಭೇಟಿ ನೀಡಿ ವನ್ಯ ಜೀವಿಗಳ ಕುರಿತು ಮಾಹಿತಿ ಸಂಗ್ರಹಿಸುವುದರ ಜೊತೆಯಲ್ಲೇ ಅಧಿಕಾರಿಗಳ ಜೊತೆ ಸಭೆ ನಡೆಸುವುದರ ಮೂಲಕ ವನ್ಯ ಜೀವಿಗಳ ಮತ್ತು ಮಾನವ ಸಂಘರ್ಷದ ಕುರಿತು ಮಾತುಕತೆ ನಡೆಸಿದ್ದಾರೆ .

ಹುಲಿ ದಾಳಿಗೆ ಒಳಗಾದ ಕುಟುಂಬಕ್ಕೆ ಸಾಂತ್ವನ:
ಇದರ ನಡುವೆಯೇ ಕಳೆದ ಎರಡು ತಿಂಗಳ ಅವಧಿಯಲ್ಲಿ ಹುಲಿ ದಾಳಿಗೆ ಒಳಗಾಗಿ ಮೃತಪಟ್ಟಿದ್ದ ತಾಲೂಕಿನ ಚೌಡಹಳ್ಳಿ ಗ್ರಾಮದ ಶಿವಮಾದಯ್ಯ ಮತ್ತು ಶಿವಲಿಂಗಪ್ಪ ಕುಟುಂಬಸ್ತರನ್ನು ಭೇಟಿ ಮಾಡಿ ಸಾಂತ್ವನ ಹೇಳುವುದರ ಜೊತೆಗೆ ಇಂತಹ ಘಟನೆ ನಡೆದಿರುವುದು ದುಃಖಕರ ನಡೆದುಹೋಗಿರುವುದನ್ನು ಯೋಚಿಸುತ್ತಾ ಕೂರಬೇಡಿ ಎಂದು ಕುಟುಂಬಸ್ಥರಿಗೆ ಆತ್ಮ ಸ್ಥೈರ್ಯ ತುಂಬಿದರು, ಮೃತ ಕುಟುಂಬಸ್ಥರಲ್ಲಿ ಒಬ್ಬರಿಗೆ ಅರಣ್ಯ ಇಲಾಖೆಯಲ್ಲಿ ಖಾಯಂ ಉದ್ಯೋಗವನ್ನು ಒದಗಿಸುವ ನಿಟ್ಟಿನಲ್ಲಿ ಸರ್ಕಾರದ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಜೊತೆ ಚರ್ಚಿಸಲಾಗುವುದು ಎಂಬ ಭರವಸೆ ನೀಡಿದರು.
ಇಂದು ಮುಂಜಾನೆ ಬಂಡೀಪುರದ ಮರಳಳ್ಳದ ಕಳ್ಳಭೇಟೆ ಶಿಬಿರಕ್ಕೆ ಭೇಟಿ ನೀಡಿ ಸಿಬ್ಬಂದಿಗಳ ಕಾರ್ಯಾಚರಣೆಯ ಅನುಕೂಲತೆಗಳ ಕುರಿತು ವಿಚಾರಿಸಿದಾಗ ಸಿಬ್ಬಂದಿಗಳು ಅಲ್ಲಿರುವ ಕೆಲವು ಸಮಸ್ಯೆಗಳ ಬಗ್ಗೆ ಮಾಹಿತಿ ನೀಡಿದ್ದಾರೆ ಎನ್ನಲಾಗಿದೆ.‌ಸಿಬ್ಬಂದಿಗಳು ನಮಗೆ ಸರಿಯಾದ ವೇತನ ಸಕಾಲಕ್ಕೆ ಸಿಗುತ್ತಿಲ್ಲ ಹಾಗೂ ದಿನದ 24 ಗಂಟೆಗಳು ಕೆಲಸ ನಿರ್ವಹಿಸಬೇಕಾದ ಒತ್ತಡದ ಪರಿಸ್ಥಿತಿ ಇದೆ ಎಂದು ತಮ್ಮ ಅಸಹಾಯಕತೆಯನ್ನು ವ್ಯಕ್ತಪಡಿಸಿದ್ದಾರೆ.

ಅಕ್ರಮ ರೆಸಾರ್ಟ್ಗಳ ಮೇಲೆ ನಿಗಾ: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಒಳಗೆ ಮತ್ತು ಅರಣ್ಯಕ್ಕೆ ಹೊಂದಿಕೊಂಡಂತೆ ಹೋಟೆಲ್ ನಿರ್ಮಾಣ, ವಾಣಿಜ್ಯೋದ್ಯಮ ಚಟುವಟಿಕೆ, ಹೋಮ್ ಸ್ಟೇ ಗಳನ್ನು ಅಕ್ರಮವಾಗಿ ನಿರ್ಮಿಸಲಾಗುತ್ತಿರುವ ಕುರಿತು ಹೆಚ್ಚಿನ ನಿಗಾ ಇಡಲಾಗುವುದು , ಅರಣ್ಯ ಪ್ರದೇಶದ ಒಳಗೆ ಮತ್ತು ಸುತ್ತಲಿನ ಪ್ರದೇಶಗಳಲ್ಲಿ ಯಾವುದೇ ಅಕ್ರಮ ಕಟ್ಟಡ ಚಟುವಟಿಕೆ ನಡೆಯುತ್ತಿರುವುದು ಕಂಡು ಬಂದರೆ ಅಂತವರ ವಿರುದ್ಧ ಕಾನೂನು ರೀತಿ ದೂರು ಧಾಖಲಿಸಲಾಗುವುದು ಎಂದು ತಿಳಿಸಿದ್ದಾರೆ..
ಈ ಸಂಧರ್ಭದಲ್ಲಿ ಸಿಎಫ್ ಬಾಲಚಂದ್ರು, ಆರ್.ಎಫ್.ಓ.ನವೀನ್ ಕುಮಾರ್, ಶ್ರೀನಿವಾಸ್ , ನಿರ್ಮಾಪಕಿ ಶ್ರುತಿ ನಾಯ್ಡು ಉಪಸ್ಥಿತರಿದ್ದರು.

ವರದಿ: ಮಹಾದೇವಪ್ರಸಾದ್ ಯಡಹುಂಡಿ. ಬಿಗ್ ಟಿವಿ ನ್ಯೂಸ್.

Share

About ramu BIG TV NEWS, Kolar

Check Also

ಡಿಕೆಶಿ ವಿರುದ್ಧ ಯಡಿಯೂರಪ್ಪ ಹೊಸ ಬಾಂಬ್

ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ವಿರುದ್ಧ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸ್ಪೋಟಕ ಆರೋಪ ಮಾಡಿದ್ದಾರೆ.ಕೆಪಿಸಿಸಿ ಅಧ್ಯಕ್ಷ ಡಿ.ಕೆ. …

Leave a Reply

Your email address will not be published. Required fields are marked *

error: Content is protected !!