Breaking News
Hiring Reporter’s For more Information Contact Above Number 876 225 4007 . Program producer
Home / Breaking News / 23 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’

23 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’

Spread the love

ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಒಳನಾಡಿನಲ್ಲಿ ಜು.29 ಮತ್ತು 30ರಂದು ಭಾರಿ ಮಳೆಯಾಗುವ ಸಾಧ್ಯತೆ ಇರುವುದರಿಂದ 23 ಜಿಲ್ಲೆಗಳಲ್ಲಿ ‘ಯೆಲ್ಲೊ ಅಲರ್ಟ್’ ಘೋಷಿಸಿರುವುದಾಗಿ ಹವಾಮಾನ ಇಲಾಖೆ ತಿಳಿಸಿದೆ.

ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ, ಕಲಬುರ್ಗಿ, ಗದಗ, ಧಾರವಾಡ, ಬೀದರ್, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಬುಧವಾರ ‘ಯೆಲ್ಲೊ ಅಲರ್ಟ್’ ಘೋಷಿಸಲಾಗಿದೆ.

ದಕ್ಷಿಣ ಒಳನಾಡಿನಲ್ಲಿ ಕಳೆದ ಐದು ದಿನಗಳಿಂದ ಮಳೆ ತಗ್ಗಿತ್ತು.ಈ ಭಾಗದಲ್ಲಿ ಆಗಸ್ಟ್ 1ರವರೆಗೆ ಭಾರಿ ಮಳೆಯಾಗುವ ಸಾಧ್ಯತೆ ಇದೆ.ಎಚ್ಚರಿಕೆ: ಕರಾವಳಿಯಲ್ಲಿ ವೇಗವಾದ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಎರಡು ದಿನಗಳವರೆಗೆ ಕಡಲಿಗೆ ಇಳಿಯದಂತೆ ಇಲಾಖೆ ಎಚ್ಚರಿಸಿದೆ.

ಮಳೆ, ಎಲ್ಲಿ ಎಷ್ಟು? : ಮಂಗಳೂರು ಹಾಗೂ ಮಂಕಿಯಲ್ಲಿ ಗರಿಷ್ಠ 7 ಸೆಂ.ಮೀ ಮಳೆಯಾಗಿದೆ. ಭಟ್ಕಳ, ಕಾರವಾರ 6, ಅಂಕೋಲಾ, ಗದಗ 5, ಬೆಳ್ತಂಗಡಿ 4, ಮೂಡುಬಿದಿರೆ, ಕುಂದಾಪುರ, ಕೊಪ್ಪಳ 3, ವಿರಾಜಪೇಟೆ, ದಾವಣಗೆರೆ ಹಾಗೂ ಹರಪನಹಳ್ಳಿಯಲ್ಲಿ ತಲಾ 1 ಸೆಂ.ಮೀ ಮಳೆಯಾಗಿದೆ.

ಉತ್ತಮ ಮಳೆ: ಕೊಡಗು ಜಿಲ್ಲೆಯಲ್ಲಿ ಉತ್ತಮ ಮಳೆಯಾಗಿದೆ. ಚಾಮರಾಜನಗರದಲ್ಲಿ ಸಾಧಾರಣ ಮಳೆಯಾಗಿದ್ದು, ಮೈಸೂರಿನಲ್ಲಿ ಬಿರುಸಿನಿಂದ ಸುರಿದಿದೆ. ಚಿಕ್ಕಮಗಳೂರು, ಬೀದರ್, ಬೆಳಗಾವಿ, ಧಾರವಾಡ, ಗದಗ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಿದೆ. ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಕ್ಷೀಣಿಸಿದೆ.

Check Also

ಡಿ ಬಾಸ್ ಅಭಿಮಾನಿಗಳಿಗೆ ಮತ್ತೊಂದು ಸಿಹಿ ಸುದ್ದಿ

Spread the loveಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ‘ರಾಬರ್ಟ್’ ಚಿತ್ರತಂಡದಿಂದ ಮತ್ತೊಂದು ಸಿಹಿ ಸುದ್ದಿ ಅಭಿಮಾನಿಗಳಿಗೆ ಸಿಕ್ಕಿದೆ. ‘ರಾಬರ್ಟ್’ ಬಿಡುಗಡೆಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ

Hiring Reporter’s For more Information Contact Above Number 876 225 4007 . Program producer
error: Content is protected !!